ಕಸಾಪ ನಾಡಿಗೆ ಮಾದರಿ
ಕ.ಪ್ರ. ವಾರ್ತೆ, ಶಿವಮೊಗ್ಗ, ಡಿ.5
ಶಾಲಾ ಹಂತದಲ್ಲೇ ಮಕ್ಕಳಿಗೆ ಕನ್ನಡ ಭಾಷೆ ಮತ್ತು ಸಾಹಿತ್ಯ ಕುರಿತು ಆಸಕ್ತಿ ಮೂಡಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ನಿರಂತರ ಪರಿಶ್ರಮ ನಾಡಿಗೆ ಮಾದರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಉಮೇಶ್ ಆರಾಧ್ಯ ಹೇಳಿದರು.
ಜಿಲ್ಲಾ ಕಸಾಪ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ವಿದ್ಯಾನಗರ ಬಡಾವಣೆಯಲ್ಲಿರುವ ಭಾರತೀಯ ವಿದ್ಯಾಭವನದ ಆವರಣದಲ್ಲಿ ಏರ್ಪಡಿಸಿದ್ದ ಶಾಲೆಗೊಂದು ಸಾಹಿತ್ಯ ಕಾರ್ಯಕ್ರಮದಲ್ಲಿ ಅವರು, ಕನ್ನಡ ಭಾಷೆ, ಸಾಹಿತ್ಯ ಕಲಿಯಲು ಅವಕಾಶಗಳು ಹಲವು ಇವೆ. ಅವುಗಳ ಮಾಹಿತಿ ಅರಿವು ಬಹಳ ಮುಖ್ಯ ಎಂದರು.
ವಿಶ್ವ ಮಕ್ಕಳ ದಿನಾಚರಣೆ: ಮಕ್ಕಳ ಹಕ್ಕುಗಳ ಆಯೋಗ ವಿಶ್ವಸಂಸ್ಥೆಯ ಒಮ್ಮತದ ತೀರ್ಮಾನದಂತೆ 1989ರ ನ.30 ರಂದು ವಿಶ್ವ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತದೆ ಎಂದ ಅವರು, ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 40ರಷ್ಟಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು. ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಲು ನೆರವಾಗುವುದು. ಅವರಿಗಾಗುವ ಅನ್ಯಾಯ ತಡೆಯುವ ಪ್ರಯತ್ನ ಆಯೋಗದಿಂದ ನಡೆಯಲಿದೆ ಎಂದು ಅವರು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳು ಕೇಳಿದ ಅನೇಕ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಅನೇಕ ಮಾಹಿತಿಗಳನ್ನು ನೀಡಿದರು. ವಿದ್ಯಾರ್ಥಿನಿ ಸಂಜನ ಅವರ ಅಧ್ಯಕ್ಷತೆಯಲ್ಲಿ ಹಲವು ವಿದ್ಯಾರ್ಥಿಗಳು ಸ್ವರಚಿತ ಕವನ, ಕಥೆ ವಾಚನ ಹಾಗೂ ಪದ್ಯ, ಗದ್ಯ, ವಿಜ್ಞಾನ, ಸಮಾಜ ವಿಚಾರ ಕುರಿತು ಮಾತನಾಡಿದರು.
ಸಂಸ್ಥೆಯ ಕೋಶಾಧ್ಯಕ್ಷ ನಾಗರಾಜ್, ಶಾಲೆ ಪ್ರಾಂಶುಪಾಲ ಇಂದು, ತಾಲೂಕು ಕಸಾಪ ಅಧ್ಯಕ್ಷ ಶೀಲಾ ಸುರೇಶ್, ಪರಿಷತ್ತು ಸಂಚಾಲಕ ಎಂ.ಎಂ. ಸ್ವಾಮಿ, ಜಯಪ್ರಕಾಶ್ ಮೊದಲಾದವರು ಇದ್ದರು.
ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಟಿ. ವಿ. ಜ್ಞಾನೇಶ್ವರಿ ಸ್ವಾಗತಿಸಿದರು. ಶಿವಮ್ಮ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

