ಶಿವಮೊಗ್ಗ

ಅತ್ಯಾಚಾರ ಆರೋಪಿ ಬಂಧನಕ್ಕೆ ಆಗ್ರಹ

Published On :

ಶಿವಮೊಗ್ಗ: ಭದ್ರಾವತಿಯ ಜನ್ನಾಪುರದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಇಲ್ಲಿನ ವಕೀಲರೊಬ್ಬರು ತಮ್ಮ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸಕ್ಕೆಂದು ಇಟ್ಟುಕೊಂಡಿದ್ದ ಯುವತಿಯ ಮೇಲೆ ವಕೀಲರ ಪುತ್ರ ಅತ್ಯಾಚಾರವೆಸಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ, ಆರೋಪಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಯುವತಿಯ ಗರ್ಭಪಾತ ಮಾಡಿಸಲು ಸಹಕರಿಸಿದ ಸರ್ಕಾರಿ ವೈದ್ಯರನ್ನು ಅಮಾನತು ಮಾಡಬೇಕು, ಅಪರಾಧಿಗಳಿಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಅತ್ಯಾಚಾರಕ್ಕೊಳಗಾದ ಬಾಲಕಿಗೆ 5 ಲಕ್ಷ ಪರಿಹಾರ ಹಾಗೂ ಯುವತಿಯ ಕುಟುಂಬದವರಿಗೆ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಚಿನ್ನಯ್ಯ, ಕೆ.ಎ. ರಾಜ್‌ಕುಮಾರ್, ಎಂ. ಪಳನಿ ರಾಜ್, ಮಂಜುನಾಥ ಚಿಪ್ಪಳಿ, ಪ್ರಕಾಶ ಲಿಗಾಡಿ ಮತ್ತಿತರರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.