ಶಿವಮೊಗ್ಗ

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಅಪ್ಪಾಜಿ

Published On :

ಭದ್ರಾವತಿ: ಮಕ್ಕಳಲ್ಲಿರುವ ನೈಜ ಪ್ರತಿಭೆ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸೂಕ್ತವಾದ ವೇದಿಕೆ ಎಂದು ಶಾಸಕ ಎಂ.ಜೆ. ಅಪ್ಪಾಜಿ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರ್ವಶಿಕ್ಷಣ ಅಭಿಯಾನ ಪಟ್ಟಣದ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಿಕ್ಷಣ ಸಂಸ್ಥೆಯ ಸತ್ಯಸಾಯಿ ಸೇವಾಕ್ಷೇತ್ರದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆಗಳು ಮಕ್ಕಳಿಂದ ಸಹಜವಾಗಿ ಮೂಡಿಬರಬೇಕೇ ಹೊರತು ಅವುಗಳನ್ನು ತಿದ್ದಲು ಶಿಕ್ಷಕರು ಯತ್ನಿಸಬಾರದೆಂದು ಕಿವಿಮಾತು ಹೇಳಿದರು.
ಮಕ್ಕಳಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಎಲ್ಲ ಮಕ್ಕಳಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅವುಗಳನ್ನು ಹುಡುಕಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿದೆ. ತಾಲೂಕು ಮಟ್ಟದ ಈ ಪ್ರತಿಭಾ ಕಾರಂಜಿಯಲ್ಲಿ ಮಕ್ಕಳು ಉತ್ತಮ ಪ್ರದರ್ಶನ ನೀಡಿ ಮುಂದೆ ನಡೆಯುವ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ಅಪ್ಪಾಜಿ ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಹೇಮಾಪಾವನಿ, ಜಿ.ಪಂ. ಸದಸ್ಯರುಗಳಾದ ಎಚ್.ಎಲ್. ಷಡಾಕ್ಷರಿ, ಎಸ್. ಕುಮಾರ್ ಮತ್ತು ಸುಜಾತ, ತಾ.ಪಂ. ಅಧ್ಯಕ್ಷೆ ಭುವನೇಶ್ವರಿ, ತಹಸೀಲ್ದಾರ್ ಸಿದ್ದಮಲ್ಲಪ್ಪ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಂ. ಮಲ್ಲೇಶಪ್ಪ,  ನಗರಸಭಾ ಸದಸ್ಯ  ನಟರಾಜ್, ಪ್ರಶಾಂತಿ ಸೇವಾ ಟ್ರಸ್ಟಿನ ಅಧ್ಯಕ್ಷ ದೇವೇಂದ್ರಪ್ಪ, ಪ್ರಭಾಕರ ಬೀರಯ್ಯ, ಎಂ.ಎಸ್. ಬಸವರಾಜ್, ಸಿದ್ದಪ್ಪ, ಎಚ್.ಎಂ. ರೇವಣಸಿದ್ದಪ್ಪ, ಶಿವಲಿಂಗೇಗೌಡ, ಮಹೇಂದ್ರ ಮೊದಲಾದವರುವೇದಿಕೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.