ಶಿವಮೊಗ್ಗ

ಮಾನವೀಯ ಮೌಲ್ಯ ಜತೆಗೆ ಕೊಡುಗೆ ನೀಡಿ; ಕಣ್ಣನ್

Published On :

ಸಾಗರ: ನಾವು ಮಾನವೀಯ ಮೌಲ್ಯವನ್ನು ಅಳವಡಿಸಿಕೊಳ್ಳುವ ಜೊತೆಗೆ ಸಮಾಜಕ್ಕೆ ನಮ್ಮಿಂದಾದ ಕೊಡುಗೆ ನೀಡಬೇಕು ಎಂದು ವಾಗ್ಮಿ, ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ತಿಳಿಸಿದರು.
ತಾಲೂಕು ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶೃಂಗೇರಿ ಶಂಕರಮಠ ಶನಿವಾರ ಹಮ್ಮಿಕೊಂಡಿದ್ದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ನಾಗರಿಕ ವರ್ತನೆ ಇದ್ದರೆ ಪ್ರಯೋಜನವಿಲ್ಲ. ಬದಲಾಗಿ ಸಂಸ್ಕಾರ ಇರಬೇಕು ಎಂದು ಅಭಿಪ್ರಾಯಪಟ್ಟರು.
ಸಾಮರಸ್ಯ ಕಳೆದುಕೊಳ್ಳುತ್ತಿದೆ: ಪ್ರತಿ ಹಂತದಲ್ಲಿಯೂ ಜಾತಿ ನಮ್ಮ ನಡುವೆ ಅಡ್ಡಗೋಡೆಯಾಗಿ ನಿಲ್ಲುತ್ತಿದೆ. ಮತ್ತೊಬ್ಬನಿಗೆ ಸ್ಪಂದಿಸಬೇಕು ಎಂಬ ಇಚ್ಛೆ ಇದ್ದರೂ ಆತನ ಜಾತಿ ಯಾವುದು ಎಂದು ನೋಡುವ ಸಂಕುಚಿತ ಮನೋಭಾವ ಜಾಗೃತವಾಗುತ್ತಿದೆ. ಇದರಿಂದ ಸಾಮಾಜಿಕ ಸಾಮರಸ್ಯ ಎನ್ನುವ ಪದ ತನ್ನ ಅರ್ಥವನ್ನು ಕಳೆದುಕೊಳ್ಳುವಂತಾಗಿದೆ. ಜಾತಿಗಿಂತ ನೀತಿ, ಬದುಕುವ ರೀತಿ ಮುಖ್ಯ ಎನ್ನುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು.
ಶೃಂಗೇರಿ ಶಂಕರಮಠದ ಸಾಗರ ಶಾಖೆಯ ಧರ್ಮಾಧಿಕಾರಿ ಎಸ್.ಆರ್. ತಿಮ್ಮಪ್ಪ ಪುಷ್ಪವನ್ನು ಸಭಿಕರ ಮೇಲೆ ಎರಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
 ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀಧರ ಆರ್. ಭಟ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್. ಬಸವರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಆರ್.ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ಜಿ. ಪರಮೇಶ್ವರಪ್ಪ, ಎ.ಪಿಎಂಸಿ ಸದಸ್ಯ ಎಂ.ಸಿ. ಪರಶುರಾಮಪ್ಪ, ಛಾಯಾಪತಿ, ವಿಶ್ವನಾಥ್, ನಚಿಕೇತ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.