ಶಿವಮೊಗ್ಗ

ಕರಡು ಪಟ್ಟಿ ತಿದ್ದುಪಡಿಗೆ ಅವಕಾಶ

Published On :

ಭದ್ರಾವತಿ: ಸಾಮಾಜಿಕ, ಆರ್ಥಿಕ ಮತ್ತು ಜಾತಿಗಣತಿ 2011(ಎಸ್ಸಿಸಿಸಿ 2011)ರ ಕರಡು ಪಟ್ಟಿಯು ಸಿದ್ಧವಾಗಿದ್ದು, ಭದ್ರಾವತಿ ನಗರಸಭೆ ವ್ಯಾಪ್ತಿಗೊಳಪಟ್ಟ 35 ವಾರ್ಡುಗಳ ಕರಡು ಪಟ್ಟಿಗಳಲ್ಲಿ ತಿದ್ದುಪಡಿಗಳೇನಾದರೂ ಇದ್ದರೆ ಸೂಚಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪೌರಾಯುಕ್ತ ಬಿ.ಡಿ. ಬಸವರಾಜಪ್ಪ ತಿಳಿಸಿದ್ದಾರೆ. 35 ವಾರ್ಡುಗಳ ಗಣತಿ ಕಾರ್ಯವು ಪೂರ್ಣಗೊಂಡಿದ್ದು, ಸರ್ಕಾರದ ಆದೇಶದಂತೆ ಕರಡು ಪಟ್ಟಿಯನ್ನು ಸಿದ್ಧಪಡಿಸಿ ನಗರಸಭೆಯ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಗಣತಿಪಟ್ಟಿಯನ್ನು ಪರಿಶೀಲಿಸಿ ತಮ್ಮ ಕುಟುಂಬದ ಹೆಸರು, ಸದಸ್ಯರ ಹೆಸರು, ಜಾತಿ ಹೆಸರು, ಆರ್ಥಿಕ ಮತ್ತಿತರ ಮಾಹಿತಿಗಳು ಬಿಟ್ಟುಹೋಗಿದ್ದಲ್ಲಿ ಅಥವಾ ತಪ್ಪಾಗಿದ್ದಲ್ಲಿ ಆಯಾ ವಾರ್ಡಿನ ಕರವಸೂಲಿಗಾರರ ಬಳಿ ನಮೂನೆ ಎ, ಬಿ, ಸಿ, ಡಿ ಅರ್ಜಿಗಳನ್ನು ಪಡೆದು ತಿದ್ದುಪಡಿ ಮಾಡಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಡಿ.21ರ ವರೆಗೆ ಹಕ್ಕು ಬಾದ್ಯತಾ ಮತ್ತು ಆಕ್ಷೇಪಣಾ ಅರ್ಜಿಗಳನ್ನು ನಿಯೋಜಿಸಿದ ಅಧಿಕಾರಿಗಳು ಕಚೇರಿಯಲ್ಲಿ ಸ್ವೀಕರಿಸಲಾಗುವುದು.ಫೆ.20ರಂದು ತಿದ್ದುಪಡಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪೌರಾಯುಕ್ತರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.