ನಿಟ್ಟೂರಿನಲ್ಲಿ ಬುಡಕಟ್ಟು ವಾಸಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಟಿ ಹೊಸನಗರ ಟಿ ಡಿ.8
ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕಾಡಿನ ಜೊತೆಗೆ ಬದುಕು ಕಟ್ಟಿಕೊಂಡಿರುವ ಬುಡಕಟ್ಟುವಾಸಿಗಳ ಬದುಕನ್ನು ರಕ್ಷಿಸುವಂತೆ ಆಗ್ರಹಿಸಿ ಬುಡಕಟ್ಟು ವಾಸಿಗಳು ಪ್ರತಿಭಟನೆ ನಡೆಸಿದರು.
ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಒಕ್ಕೂಟದ ಅಡಿಯಲ್ಲಿ ನಿಟ್ಟೂರು ಗ್ರಾಪಂ ವ್ಯಾಪ್ತಿಯ ಹಿರೇಮನೆ ಸುತ್ತಮುತ್ತಲಿನ ಬುಡಕಟ್ಟು ವಾಸಿಗಳು ನಿಟ್ಟೂರಿನ ಪ್ರಮುಖ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ಸರ್ಕಾರಕ್ಕೆ ಗ್ರಾಪಂ ಮೂಲಕ ಮನವಿ ನೀಡಿ, ಬುಡಕಟ್ಟು ಸಮುದಾಯಗಳು ತಲತಲಾಂತರದಿಂದಲೂ ಕಾಡಿನಲ್ಲಿ ಜೀವನ ಕಂಡುಕೊಂಡಿದ್ದು, ಕಾಡಿನ ರಕ್ಷಣೆ ಹಾಗೂ ಅದರ ಉಳಿವಿಗಾಗಿ ತಮ್ಮನ್ನು ತೊಡಗಿಸಿಗೊಂಡಿದ್ದರೂ ಅವರ ಹಕ್ಕು ಕಸಿಯುವ ಕೆಲಸವಾಗುತ್ತಿದೆ ಎಂದು ಆರೋಪಿಸಿದರು.
ಜಾಗತೀಕರಣ, ಖಾಸಗೀಕರಣದ ಹೆಸರಿನಲ್ಲಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದು ನಮ್ಮ ಬದುಕಿಗೆ ಹಾಗೂ ನಮ್ಮ ಸಂಸ್ಕೃತಿಯ ನಾಶಕ್ಕೆ ಕಾರಣವಾಗಿದೆ, ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನವಾಗಿ 7 ವರ್ಷ ಕಳೆದರೂ ಸರ್ಕಾರ ಅದನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಮಂಜಗಳಲೆ ಗ್ರಾಮದ ಬೆಳ್ಳಕ್ಕ ಹಾಗೂ ಕುಬಾರ ಹೊಂಡದಲ್ಲಿ ವಾಸಿಸುವ ಅರಣ್ಯವಾಸಿಗಳಿಗೆ ಪಾರಂಪರಿಕ ನೀರಿಗೆ ಆಗುತ್ತಿರುವ ತೊಂದರೆ ನಿವಾರಿಸಿ ಪಾರಂಪರಿಕ ನೀರಿನ ಹಕ್ಕು ಒದಗಿಸಿ ಕೊಡುವಂತೆ ಆಗ್ರಹಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ರಾಮಣ್ಣ ಕಾರ್ಗಲ್, ಚಂದ್ರಶೇಖರ್, ಸಿದ್ದಪ್ಪ, ಗೋವಿಂದ ಕುಂಬಾರ ಹೊಂಡ, ಗ್ರಾಮ ಪಂಚಾಯಿತಿ ಸದಸ್ಯೆ ಲಕ್ಷ್ಮೀ, ಉಷಾ ಹಿಡ್ಲಮನೆ, ನಾಗರಾಜ ಏಳಿಗೆ ಶ್ರೀಧರ ಮತ್ತಿತರರು ಪಾಲ್ಗೊಂಡಿದ್ದರು.
ಮನವಿ ಸ್ವೀಕಾರ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಶ್ರೀಕಾಂತ್ ಅಟ್ಟಳ್ಳಿ, ಚಂದ್ರಶೇಖರ್ ಶೆಟ್ಟಿ, ಶಿವರಾಮಶೆಟ್ಟಿ, ಕೂಡ್ಲುಕೊಪ್ಪ ಸುರೇಶ್, ಗಿರೀಶ್, ಚಂದಯ್ಯ ಜೈನ್ ಸೇರಿದಂತೆ ಊರಿನ ಪ್ರಮುಖರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

