ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ.ಎಸ್. ಈಶ್ವರಪ್ಪ
ಕ.ಪ್ರ.ವಾರ್ತೆ ಶಿವಮೊಗ್ಗ ಡಿ. 8
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಚುನಾವಣೆ ಎದುರಿಸುವಾಗ ಬಿಜೆಪಿ ಕೇವಲ ಅಡ್ವಾಣಿ ಮತ್ತು ವಾಜಪೇಯಿ ಅವರನ್ನು ನೆಚ್ಚಿಕೊಂಡಿತ್ತು. ಆದರೆ, ಈಗ ಬಿಜೆಪಿಯಲ್ಲಿ ಪ್ರಬಲವಾದ ಪ್ರಾಂತೀಯ ನಾಯಕತ್ವ ಬೆಳವಣಿಗೆಯಾಗಿದೆ. ಹಾಗಾಗಿಯೇ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಧ್ಯಪ್ರದೇಶದಲ್ಲಿ ಶಿವರಾಜ್ಸಿಂಗ್ ಚೌಹಾಣ್ ಪ್ರಬಲ ಬಿಜೆಪಿ ನಾಯಕರಾಗಿ ಬೆಳೆದಿದ್ದಾರೆ. ಅದೇ ರೀತಿ ರಾಜಸ್ಥಾನದಲ್ಲಿ ವಸುಂಧರರಾಜೆ, ಛತ್ತೀಸ್ಗಡದಲ್ಲಿ ರಮಣಸಿಂಗ್ ಹೀಗೆ ಪ್ರಾಂತೀಯ ನಾಯಕರು ಪ್ರಬಲವಾಗಿ ಗುರುತಿಸಿಕೊಂಡಿದ್ದಾರೆ. ಇದು ಬಿಜೆಪಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.
ಜೊತೆಗೆ ನರೇಂದ್ರ ಮೋದಿ ನಾಯಕತ್ವಕ್ಕೂ ಜನರು ಈ ಚುನಾವಣೆಯಲ್ಲಿ ಮನ್ನಣೆ ನೀಡಿದ್ದಾರೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷ ಸೇರ್ಪಡೆ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಎಸ್ವೈಗೆ ಆಹ್ವಾನ ನೀಡಲಾಗಿದೆ. ಹಾಗೆಯೇ ರಾಷ್ಟ್ರಭಕ್ತರು ಹಾಗೂ ರೈತ ಹೋರಾಟಗಾರರನ್ನು ಬಿಜೆಪಿಗೆ ಕರೆ ತರಲಾಗುವುದು. ಈ ಬಗ್ಗೆ ಶೀಘ್ರವೇ ರಾಷ್ಟ್ರೀಯ ಮುಖಂಡರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

