'ಪ್ರತಿಭೆ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ'
ಕ.ಪ್ರ.ವಾರ್ತೆ ಹೊಸದುರ್ಗ ಡಿ.10
ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಬೆಳೆಸಿ ಪ್ರೋತ್ಸಾಹಿಸಲು ಶಿಕ್ಷಕರ ಸಹಕಾರ ಅತ್ಯಗತ್ಯ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ತಿಳಿಸಿದರು.
ಪಟ್ಟಣದ ಶ್ರೀ ತೋಟದ ರಾಮಯ್ಯ ಗಂಗಾಂಭಿಕಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮಕ್ಕಳು ಅವರಲ್ಲಿನ ಪ್ರತಿಭೆಗಳ ಅನಾವರಣಕ್ಕೆ ಶಿಕ್ಷಕರು ನಿತ್ಯದ ಪಠ್ಯ ಸಹಪಠ್ಯ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ಗುರುತಿಸಿ ಶಿಕ್ಷಕ ಪ್ರೇರೇಪಿಸುವ ಕಾರ್ಯದಿಂದ ಮಕ್ಕಳಲ್ಲಿ ಪ್ರತಿಭೆ ಅಭಿವ್ಯಕ್ತಿಗೊಳ್ಳುತ್ತದೆ ಎಂದರು.
ಮಕ್ಕಳಿಗೆ ಜೀವನದ ಶಿಕ್ಷಣದ ಅಗತ್ಯವಿದೆ ಮಗುವಿನ ಬುದ್ಧಿವಂತಿಕೆಯನ್ನು ಅಂಕಗಳ ಆಧಾರದ ಮೇಲೆ ನಿರ್ಧಾರಗೊಳ್ಳುತ್ತಿರುವುದು ವಿಪರ್ಯಾಸ, ಇಂದಿನ ಪೀಳಿಗೆ ಸಂಸ್ಕಾರಯುತವಾದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಗುರು ಹಿರಿಯರನ್ನ ಗೌರವಿಸುವ ನೈತಿಕ ಶಿಕ್ಷಣದ ಅಗತ್ಯವಿದೆ ಎಂದು ತಿಳಿಸಿದರು.
ಪ್ರಶಂಸನೀಯ: ಜಿಲ್ಲಾ ಪಂಚಾಯ್ತಿ ಸದಸ್ಯ ಪರುಶುರಾಮಪ್ಪ ಮಾತನಾಡಿ, ಶಾಲೆಗಳಲ್ಲಿ ಸಹಪಠ್ಯ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ಅಗತ್ಯವಿದ್ದು, ಗ್ರಾಮೀಣ ಮಕ್ಕಳ ಪ್ರತಿಭೆಗಳು ಇಂತಹ ಕಾರ್ಯಕ್ರಮಗಳಿಂದ ಹೊರಹೊಮ್ಮುತ್ತಿರುವುದು ಪ್ರಶಂಸನೀಯ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಜಿಪಂ ಸದಸ್ಯೆ ಅನಿತಾ ಬಸವರಾಜ್ ಮಾತನಾಡಿ, ಸ್ಥಳೀಯ ಪ್ರತಿಭೆಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಬೆಲೆದರೆ ಗ್ರಾಮೀಣ ಜನಪದ ಸೊಗಡು ಈ ಕಾರ್ಯಕ್ರಮಗಳಲ್ಲಿ ಕಾಣುತ್ತೇವೆ ಎಂದರು.
ತಾಲೂಕು ಪಂಚಾಯ್ತಿ ಅಧ್ಯಕ್ಷೆ ಬೋರಮ್ಮ ಮಳಲಿ ರಾಜಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಬಿಇಒ ತಿಪ್ಪೇಸ್ವಾಮಿ, ಬಿಆರ್‌ಸಿ ಮೋಸೀನ್, ಅಕ್ಷರ ದಾಸೋಹದ ಯು. ಬಸವರಾಜಪ್ಪ, ಶಿಕ್ಷಕರ ಸಂಘದ ಮೋಹನ್, ಶಿಕ್ಷಕ ಕನವಳ್ಳಿ ಹಾಜರಿದ್ದರು.
ತಾಲೂಕಿನ ವಿವಿಧ ಕ್ಲಸ್ಟರ್‌ನಿಂದ ಆಯ್ಕೆಗೊಂಡ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಪ್ರತಿಭೆಯನ್ನು ಪ್ರದರ್ಶಿಸಿದರು.
ಭರತನಾಟ್ಯದಲ್ಲಿ ಅಪೂರ್ವ ಪ್ರಥಮ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭರತನಾಟ್ಯ ಸ್ಪರ್ಧೆಯಲ್ಲಿ ಬೆಲಗೂರಿನ
ಗಂಗಮ್ಮ ಭೀಮೋಜಪ್ಪ ಬಾಲಿಕ ಪ್ರೌಢಶಾಲೆ ವಿದ್ಯಾರ್ಥಿನಿ ಬಿಎಸ್ ಅಪೂರ್ವ ಪ್ರಥಮ ಸ್ಥಾನಗಳಿಸಿದ್ದಾಳೆ. ಅವರಿಗೆ ಶಾಲೆಯ ಸಿಬ್ಬಂದಿ ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

