ಕುಡಿವ ನೀರಿಗೆ ಪ್ರತ್ಯೇಕ ವಿದ್ಯುತ್ ವಿತರಣಾ ಕೇಂದ್ರ
ಶಿವಮೊಗ್ಗ: ಶಿವಮೊಗ್ಗ ನಗರದ ನೀರು ಪೂರೈಕೆ ವ್ಯವಸ್ಥೆಗೆ ವಿದ್ಯುತ್ ಅಡಚಣೆಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ರೂಪಿತಗೊಂಡ ಪ್ರತ್ಯೇಕ ವಿದ್ಯುತ್ ವಿತರಣಾ ಕೇಂದ್ರ ಸದ್ಯವೇ ಕಾರ್ಯಾರಂಭ ಮಾಡಲಿದೆ.
ಗಾಜನೂರಿನಲ್ಲಿ ಸ್ಥಾಪನೆಗೊಂಡಿರುವ ವಿದ್ಯುತ್ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಶಿವಮೊಗ್ಗ ನಗರಕ್ಕೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಮಂಡ್ಲಿ ಕೆ.ಆರ್. ವಾಟರ್ ವರ್ಕ್ಸ್ಗೆ ಗಾಜನೂರಿನಿಂದ ನೀರನ್ನು ಪಂಪ್ ಮಾಡಲಾಗುತ್ತಿದೆ. ಈ ಪಂಪ್ಗಳಿಗೆ ಶಿವಮೊಗ್ಗ ನಗರದಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಶಿವಮೊಗ್ಗ- ಗಾಜನೂರು ನಡುವೆ ಮಳೆಗಾಲದಲ್ಲಿ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳುವುದು, ತೆಂಗಿನ ಗರಿ ಬೀಳುವುದು ಸೇರಿದಂತೆ ವಿವಿಧ ಕಾರಣದಿಂದಾಗಿ ಪಂಪ್ಸೆಟ್ಗೆ ಅಗತ್ಯವಾದ ವಿದ್ಯುತ್ ಪೂರೈಕೆಗೆ ಅಡಚಣೆಯಾಗುತ್ತಿತ್ತು. ಸಮರ್ಪಕ ವಿದ್ಯುತ್ ಪೂರೈಕೆಯಾಗದ ಕಾರಣ ನೀರಿನ ಸರಬರಾಜಿನಲ್ಲೂ ಸಾಕಷ್ಟು ಅಡಚಣೆಯಾಗುತ್ತಿತ್ತು. ಈ ಕಾರಣಕ್ಕೆ ಪ್ರತ್ಯೇಕ ವಿದ್ಯುತ್ ವಿತರಣಾ ಕೇಂದ್ರವನ್ನು ಗಾಜನೂರಿನಲ್ಲಿ ಸ್ಥಾಪಿಸಲಾಗಿದೆ.
4.35 ಕೋಟಿ ವೆಚ್ಚದಲ್ಲಿ 3 ಎಕರೆ ವಿಸ್ತೀರ್ಣದಲ್ಲಿ ಈ ವಿತರಣಾ ಕೇಂದ್ರ ಸ್ಥಾಪಿಸಿದ್ದು, ಪ್ರತ್ಯೇಕ ಲೈನ್ನೊಂದಿಗೆ ಶಿವಮೊಗ್ಗ ಎಂಆರ್ಎಸ್ನಿಂದ -ಮಂಗಳೂರು ಸಂಪರ್ಕದ ವಿದ್ಯುತ್ ಲೈನ್ನಿಂದಲೂ ಸಂಪರ್ಕ ಪಡೆಯಲಾಗುತ್ತದೆ.
ಶಾಸಕರ ಭೇಟಿ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಖುರ್ಷಿದ್ ಬಾನು, ಮೆಸ್ಕಾಂ ಹಿರಿಯ ಅಧಿಕಾರಿ ಶಶಿಧರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್.ರಮೇಶ್, ಸತೀಶ್ ಸೇರಿದಂತೆ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

