ಅಣ್ಣಾ ಹೋರಾಟಕ್ಕೆ ಶಿವಮೊಗ್ಗದಲ್ಲೂ ಬೆಂಬಲ
ಕ.ಪ್ರ.ವಾರ್ತೆ ಶಿವಮೊಗ್ಗ ಡಿ.11 ಅಣ್ಣಾ ಹಜಾರೆ ಹೋರಾಟ ಬೆಂಬಲಿಸಿ ಶಿವಮೊಗ್ಗದಲ್ಲೂ ಸತ್ಯಾಗ್ರಹ ಆರಂಭವಾಗಿದ್ದು, ಜನ ಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದ ಮುಂಭಾಗ ಅಣ್ಣಾ ಹಜಾರೆ ಹೋರಾಟ ಸಮಿತಿ ಕಾರ್ಯಕರ್ತರು ಬುಧವಾರ ಧರಣಿಪ್ರಾರಂಭಿಸಿದರು.
ಜನ ಲೋಕಪಾಲ ಮಸೂದೆ ಜಾರಿಗೊಳಿಸುವಲ್ಲಿ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಂಪೂರ್ಣ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಇಲ್ಲಿಯವರೆಗೂ ಈ ಮಸೂದೆ ಜಾರಿಗೆ ಕ್ರಮ ಕೈಗೊಂಡಿಲ್ಲ. ಸುಳ್ಳು ಭರವಸೆಗಳನ್ನೇ ನೀಡುತ್ತಿದೆ ಎಂದು ಧರಣಿ ನಿರತರು ಅಸಮಾಧಾನ ವ್ಯಕ್ತಪಡಿಸಿದರು.
ಕೇವಲ ಭರವಸೆ: ದೇಶದ ಹಿತದೃಷ್ಟಿಯಿಂದ ಭ್ರಷ್ಟಾಚಾರ ನಿಯಂತ್ರಣಕ್ಕೆ ಜನ ಲೋಕಪಾಲ ಮಸೂದೆ ಜಾರಿಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಅಣ್ಣಾ ಹೋರಾಟ ನಡೆಸಿದ ವೇಳೆ ಕೇಂದ್ರ ಸರ್ಕಾರ ಮಸೂದೆ ಜಾರಿಗೊಳಿಸುವ ಭರವಸೆ ನೀಡಿದ್ದರು. ನಂತರ ಮಸೂದೆ ಜಾರಿಗೊಳಿಸುವ ಇಚ್ಚಾಶಕ್ತಿ ಕೇಂದ್ರ ಸರ್ಕಾರಕ್ಕೆ ಇಲ್ಲದಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪುನಃ ಹೋರಾಟ ನಡೆಸುತ್ತಿರುವುದಾಗಿ ತಿಳಿಸಿದರು.
ರಾಷ್ಟ್ರದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಕೂಡಲೇ ಪ್ರಬಲ ಜನ ಲೋಕಪಾಲ ಮಸೂದೆಗೆ ಕಾನೂನಿನ ರೂಪ ನೀಡಬೇಕು. ಯಾವುದೇ ರೀತಿ ವಿಳಂಬ ಧೋರಣೆ ಅನುಸರಿಸಬಾರದು. ಈ ಹಿಂದಿನಂತೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಧರಣಿ ನಿರತರು ಎಚ್ಚರಿಸಿದರು.
ಹೋರಾಟ ಸಮಿತಿ ಪ್ರಮುಖರಾದ ಡಾ.ಎಲ್.ಎನ್. ನಾಯಕ್, ಡಾ. ಚಿಕ್ಕಸ್ವಾಮಿ, ರಮೇಶ್, ಜನಮೇಜಿರಾವ್, ರುದ್ರಪ್ಪ, ಆನಂದ್, ಮೇಘರಾಜ್, ವಿಜಯ್, ಮಂಜುನಾಥ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

