ಶಿವಮೊಗ್ಗ

15ರಂದು ಕೆಳದಿ ಉತ್ಸವ; ಭರದ ಸಿದ್ಧತೆ

Published On :

ಸಾಗರ:  ಐತಿಹಾಸಿಕ ಕೆಳದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಾಲ್ಲೂಕಿನ ಕೆಳದಿಯಲ್ಲಿ ಡಿ.15ರಂದು ನಡೆಯುವ ಕೆಳದಿ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ.
ಉತ್ಸವದ ಕಾರ್ಯಕ್ರಮಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಉತ್ಸವ ಆಚರಣಾ ಸಮಿತಿ ಅಧ್ಯಕ್ಷರಾದ ಉಪವಿಭಾಗಾಧಿಕಾರಿ ಡಾ.ಉದಯಕುಮಾರ ಶೆಟ್ಟಿ ಮಾಹಿತಿ ನೀಡಿದರು.
ಉತ್ಸವ ಉದ್ಘಾಟನೆ: ಉತ್ಸವದ ಅಂಗವಾಗಿ ಡಿ. 13ರಂದು ಬಂದಗದ್ದೆ ಭಾರತಿ ಪ್ರೌಢಶಾಲೆ ಆವರಣದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಡಿ.15ರಂದು ಬೆಳಿಗ್ಗೆ 8-30ಕ್ಕೆ ಕೆಳದಿ ಚೌಡಪ್ಪ ನಾಯಕ ಮಹಾದ್ವಾರದಿಂದ ಮೆರವಣಿಗೆ ಆರಂಭಗೊಳ್ಳಲಿದೆ. ಬೆಳಿಗ್ಗೆ 10-30ಕ್ಕೆ ಕೆಳದಿ ರಾಣಿ ಚನ್ನಮ್ಮಾಜಿ ವೇದಿಕೆಯಲ್ಲಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಸಚಿವ ಕಿಮ್ಮನೆ ರತ್ನಾಕರ್ ವಸ್ತುಪ್ರದರ್ಶನ, ಸಚಿವ ಎಚ್.ಆಂಜನೇಯ ನಾಣ್ಯ-ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ. 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ.ನಾ.ಡಿಸೋಜ ಅವರನ್ನು ಸನ್ಮಾನಿಸಲಾಗುವುದು ಎಂದರು.
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್, ಮಧು ಬಂಗಾರಪ್ಪ, ಶಾರದ ಪೂರ್ಯಾನಾಯ್ಕ್, ಎಂ.ಜೆ.ಅಪ್ಪಾಜಿ, ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಭಾರತಿ ಶೆಟ್ಟಿ, ಎಂ.ಬಿ.ಭಾನುಪ್ರಕಾಶ್, ಆರ್.ಕೆ.ಸಿದ್ದರಾಮಣ್ಣ, ಪ್ರೊ. ಪಿ.ವಿ.ಕೃಷ್ಣ ಭಟ್ಟ ಭಾಗವಹಿಸಲಿದ್ದಾರೆ ಸಂಜೆ 6ಕ್ಕೆ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪದಲ್ಲಿ ರಂಗಕರ್ಮಿ ಪ್ರಸನ್ನ ಸಮಾರೋಪ ಭಾಷಣ ಮಾಡಿಲಿದ್ದಾರೆ.
ಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಹರೀಶ್ ಗಂಟೆ, ಜಿಪಂ ಸದಸ್ಯೆ ಸುಮಂಗಲ ರಾಮಕೃಷ್ಣ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಕಾಗೋಡು ಅಣ್ಣಪ್ಪ, ಕೆಳದಿ ಗ್ರಾಪಂ ಅಧ್ಯಕ್ಷ ಚೌಡಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಟಿ.ಸ್ವಾಮಿ, ವೆಂಕಟೇಶ್ ಜೋಯಿಸ್, ತಹಶೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜಿ.ಜೋಯಪ್ಪ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.