ಶಾಸಕ ಸಂಭಾಜಿ ಗಡೀಪಾರಿಗೆ ಆಗ್ರಹ
ಕ.ಪ್ರ.ವಾರ್ತೆ ಟಿ ಜೋಗ್ಫಾಲ್ಸ್ ಟಿ ಡಿ.12
ಕಾರ್ಗಲ್ನ ವಿವಿಧ ಕನ್ನಡ ಪರ ಸಂಘಟನೆಗಳ ವತಿಯಿಂದ ಬೈಕ್ ರ್ಯಾಲಿ ನಡೆಸುವ ಮೂಲಕ ಶಾಸಕ ಸಂಭಾಜಿ ಗಡೀಪಾರಿಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕರವೇ ನಾರಾಯಣಗೌಡ ಬಣದ ತಾಲೂಕು ಸಂಚಾಲಕ ವಿ. ಸಂತೋಷ್ಕುಮಾರ್, ಶಾಸನ ಸಭೆಯಲ್ಲಿ ಕರ್ನಾಟಕ ಸರ್ಕಾರವನ್ನು ನಿಂದಿಸಿದ ಕ್ರಮವನ್ನು ಸಹಿಸಲು ಅಸಾಧ್ಯವಾದ ವಿಚಾರವಾಗಿದೆ. ಇದನ್ನು ಕನ್ನಡ ಪರ ಸಂಘಟನೆಗಳು ಒಕ್ಕೊರಲಿನಿಂದ ಖಂಡಿಸುತ್ತದೆ ಎಂದು ಹೇಳಿದರು.
ಮಲೆನಾಡು ಕರವೇ ಬಣದ ಎಚ್.ಎಸ್. ಸಾದಿಕ್ ಕನ್ನಡ ಪರ ಸಂಘಟನೆಗಳ ಪರವಾಗಿ ಶಾಸಕ ಸಂಭಾಜಿ ಗಡೀಪಾರು ಮಾಡಬೇಕೆಂದು ಆಗ್ರಹಿಸಿ ಮನವಿ ಪತ್ರ ಓದಿದರು.
ವಿವಿಧ ಸಂಘಟನೆಗಳ ಪ್ರಮುಖರು ಸೇರಿ ಉಪ ತಹಸೀಲ್ದಾರ್ ಅವರಿಗೆ ಮನವಿ ಪತ್ರವನ್ನು ನೀಡಿದರು. ಕನ್ನಡ ಸಂಘದ ಅಧ್ಯಕ್ಷೆ ಲಕ್ಷ್ಮೀ ರಾಜು, ಕರವೇ ಕಾರ್ಗಲ್ ಘಟಕದ ಅಧ್ಯಕ್ಷ ಎನ್. ಮಂಜುನಾಥ್, ಮಲೆನಾಡು ಕರವೇ ಕಾರ್ಗಲ್ ಘಟಕದ ಅಧ್ಯಕ್ಷ ಜಾನ್, ಕನ್ನಡ ಸಂಘದ ಕಾರ್ಯದರ್ಶಿ ಅಣ್ಣಪ್ಪ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

