ಇಂದಿನಿಂದ ಫಲಪುಷ್ಪ ಪ್ರದರ್ಶನ
ಶಿವಮೊಗ್ಗ: ಡಿ.14ರಿಂದ 16ರವರೆಗೆ ಅಂಬೇಡ್ಕರ್ ಭವನ ಹಾಗೂ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಪ್ರದರ್ಶನ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್, ಪ್ರತಿವರ್ಷದಂತೆ ಈ ಬಾರಿಯೂ ಫಲಪುಷ್ಪ ಪ್ರದರ್ಶನವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ, ಜಿಪಂ, ಜಿಲ್ಲಾ ಉದ್ಯಾನ ಕಲಾ ಸಂಘ, ಆತ್ಮ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ರೂಪುಗೊಂಡಿದೆ. ವಿವಿಧ ನಮೂನೆ ಹೂಗಳ ಅಲಂಕಾರ, ಹಣ್ಣು ಕೆತ್ತನೆ, ಪ್ರದರ್ಶನ ಮಾಡಲಾಗುವುದು. ಅಂಬೇಡ್ಕರ್ ಭವನದ ಆವರಣದಲ್ಲಿ ರೈತರು ಹಾಗೂ ಪ್ರದರ್ಶನಕಾರರಿಗೆ ಅನುಕೂಲವಾಗುವಂತೆ ಪ್ರದರ್ಶನ ಮಳಿಗೆಗಳನ್ನು ನಿರ್ಮಿಸಲಾಗುತ್ತದೆ. ಡಿ.14ರಂದು ಬೆಳಗ್ಗೆ 10-30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಅಂಬೇಡ್ಕರ್ ಭವನದಲ್ಲಿ 11 ಗಂಟೆಗೆ ಆರೋಗ್ಯಕ್ಕಾಗಿ ತೋಟಗಾರಿಕೆ ಕುರಿತಂತೆ ಒಂದು ದಿನದ ತರಬೇತಿ ಕಾರ್ಯಕ್ರಮ ಕೂಡ ಆಯೋಜಿಸಲಾಗಿ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು. ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 9 ಗಂಟೆವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ವಯಸ್ಕರರಿಗೆ 5 ಶಾಲಾ ಮಕ್ಕಳಿಗೆ 2 ಶುಲ್ಕ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

