ಶಿವಮೊಗ್ಗ

ಶಿಥಿಲ ಶಾಲಾ ಕಟ್ಟಡಗಳ ದುರಸ್ತಿ: ಶಾಸಕ ಮಧು

Published On :

ಸೊರಬ:  ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಶಾಸಕ ಮಧು ಬಂಗಾರಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಪಿಯು ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳು ಹಳೇಯವಾಗಿದ್ದು, ಕೆಲವು ಶಿಥಿಲಾವಸ್ಥೆ ತಲುಪಿವೆ. ಈ ಬಗ್ಗೆ ಮಾಹಿತಿ ದೊರೆತಿದ್ದು, ಕಟ್ಟಡಗಳ ದುರಸ್ತಿ ಕಾರ್ಯ ನಡೆಯಬೇಕಿದೆ. ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆ ಸಚಿವರನ್ನು ಭೇಟಿಯಾಗಿ ಶಾಲೆಗಳ ದುರಸ್ತಿಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುವುದು ಎಂದರು.
ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್ ಮಾತನಾಡಿ, ಪ್ರತಿಭಾ ಕಾರಂಜಿ  ಕಾರ್ಯಕ್ರಮಕ್ಕೆ ಆಸಕ್ತಿ ವಹಿಸುತ್ತಿರುವ ಪೋಷಕರು, ಕಲಿಕೋತ್ಸವದಂತಹ ಕಾರ್ಯಕ್ರಮಕ್ಕೂ ಕೈ ಜೋಡಿಸಿದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಇನ್ನಷ್ಟ ಉಜ್ವಲವಾಗಲು ನೆರವಾಗಬಲ್ಲದು ಎಂದರು.
ಈ ಸಂದರ್ಭ ವಿಜ್ಞಾನ ಕ್ಷೇತ್ರದಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಸರ್ಕಾರ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದ 97 ಮಕ್ಕಳಿಗೆ ಶಾಸಕ ಮಧು ಬಂಗಾರಪ್ಪ 5000 ಗಳ ಚೆಕ್ ವಿತರಿಸಿದರು.
ನಂತರ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜ್ಞಾನದ ಮಾದರಿ, ಯೋಗಾಸನ, ಚರ್ಚಾಸ್ಪರ್ಧೆ, ಛದ್ಮವೇಷ, ಕನ್ನಡ, ಇಂಗ್ಲಿಷ್ ಕಂಠಪಾಟ ಮೊದಲಾದವುಗಳು ನಡೆದವು.
ಅಧ್ಯಕ್ಷ ಎಚ್.ಎಂ. ಬಸವಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯರಾದ ಹುನವಳ್ಳಿ ಗಂಗಾಧರಪ್ಪ, ಗುರುಕುಮಾರ್, ಮಲ್ಲಮ್ಮ ಮಲ್ಲಿಕಾರ್ಜುನ್, ಕೋಮಲ ನಿರಂಜನ್, ತಾಪಂ ಉಪಾಧ್ಯಕ್ಷೆ ನೀಲಮ್ಮ ಸುರೇಶ್, ಸಾಶಿ ಇಲಾಖೆ ಉಪನಿರ್ದೇಶಕ ಬಿ.ಸಿ.ಬಸವರಾಜಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಡಿ.ಹೊಳೆಲಿಂಗಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ಪಾಣಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ ಮಾಸ್ತರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಜಿ. ಗಣಪತಿ, ಇಒ ಮೊಹಮ್ಮದ್ ಇಸ್ಮಾಯಿಲ್ ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಾಗರಾಜ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಮಪ್ಪ, ಸಮನ್ವಯಾಧಿಕಾರಿ ಪರಶುರಾಮಪ್ಪ, ಶಿಕ್ಷಕ ವೃಂದದವರು ಕಾರ್ಯಕ್ರಮ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.