ಶಿವಮೊಗ್ಗ

ಸಹಕಾರ ಸಂಘದ ಕಾನೂನು ಬದಲಾವಣೆ ಅಗತ್ಯ: ಕರಿಯಣ್ಣ

Published On :

ಶಿವಮೊಗ್ಗ: ರಾಜ್ಯ ಸಹಕಾರ ಸಂಘಗಳಲ್ಲಿ ಸಾಕಷ್ಟು ಕಾನೂನು ತೊಡಕುಗಳಿದ್ದು, ಅವುಗಳನ್ನು ಸರ್ಕಾರ ಪರಿಷ್ಕರಿಸುವ ಅಗತ್ಯವಿದೆ ಎಂದು ರಾಜ್ಯ ಸಹಕಾರ ವಸತಿ ಮಹಾಮಂಡಳಿಯ ನಿರ್ದೇಶಕ ಹಾಗೂ ಮಾಜಿ ಶಾಸಕ ಕರಿಯಣ್ಣ ತಿಳಿಸಿದರು.
ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಶಿವಮೊಗ್ಗ ಹಾಗೂ ಶಿವಮೊಗ್ಗ ಹೌಸಿಂಗ್ ಕೋ. ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಶುಕ್ರವಾರ ರವೀಂದ್ರ ನಗರದ ಗಣಪತಿ ದೇವಾಲಯದಲ್ಲಿ ಆಯೋಜಿಸಿದ್ದ ಜಿಲ್ಲೆಯ ಎಲ್ಲಾ ಗೃಹ ನಿರ್ಮಾಣ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ವಿಶೇಷ ಸಹಕಾರ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಕಾನೂನು ಬದಲಾಗಬೇಕು: ಸಹಕಾರಿ ಕಾನೂನು ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಹಕಾರ ಫೌಂಡೇಷನ್ ಮನವಿ ಮಾಡಿದ್ದು, ಸದ್ಯದಲ್ಲೇ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದ ಅವರು, ಕಾನೂನು ಪರಿವರ್ತನೆಯಾಗದೇ ಸಹಕಾರಿಯಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಹಾಗೇ ಕಾನೂನು ಸುವ್ಯವಸ್ಥೆಯಲ್ಲಿ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದರು.
ಕಾನೂನು ಪಾಲಿಸಿ: ಸಹಕಾರಿ ಸಂಘಗಳ ಉಪನಿಬಂಧಕ ಎಸ್.ಎಚ್. ಸಂತೋಷ್ ಕುಮಾರ್, ಸಹಕಾರಿ ಸಂಘ, ಸಂಸ್ಥೆಗಳ ಸದಸ್ಯರು ಕಾನೂನು ಉದ್ದೇಶವನ್ನು ಅರಿತು ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ತೋಟಗಾರಿಕ ಮಹಾಮಂಡಳಿ ನಿರ್ದೇಶಕ ಮೋಹನ್ ಉಂಬಳೇಬೈಲು, ಜಿಲ್ಲಾ ಸಹಕಾರ ಯೂನಿಯನನ್ನಿರ್ದೇಶಕ ಮರಿಯಪ್ಪ, ಯನಿಯನ್ ಅಧ್ಯಕ್ಷ ಭೂಕಾಂತ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಪ್ರಭಾರ ಉಪನಿರ್ದೇಶಕ ಅಜ್ಜಪ್ಪ, ಎನ್. ರವಿ, ಚಂದ್ರಶೇಖರ್, ಕೆ.ಸಂಪತ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.