ಶಿವಮೊಗ್ಗ

ಮೊಳಗಿದ ಏಕತೆಯ ದನಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ.15
ಸರ್ದಾರ್ ವಲ್ಲಭಭಾಯ್ ಪಟೇಲ್ ಪುಣ್ಯತಿಥಿ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ ಏಕತಾ ಓಟದ ಹಿನ್ನೆಲೆಯಲ್ಲಿ ನಗರದಲ್ಲೂ ಸಹ ಏಕತೆಯ ದನಿಯೊಂದಿಗೆ ನಡೆಯಿತು.
ಸುಮಾರು ಒಂದೂವರೆ ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದ ಓಟ ಕಾರ್ಯಕ್ರಮ ಭಾನುವಾರ ಬೆಳಗ್ಗೆ 8.25ಕ್ಕೆ ಸೈನ್ಸ್ ಮೈದಾನದಿಂದ ಆರಂಭವಾಯಿತು. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲಿಂದ ಆರಂಭವಾಗಿ ಬಿಎಚ್ ರಸ್ತೆಯ ಕೃಷ್ಣ ಕೆಫೆಯಿಂದ ಶ್ಯಾಮಪ್ರಸಾದ ಮುಖರ್ಜಿ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತದ ಮುಖಾಂತರ ಪುನಃ ಸೈನ್ಸ್ ಮೈದಾನ ತಲುಪಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಏಕತೆಯ ಶಿರ್ಷಿಕೆ ಹೊಂದಿದ, ಶರ್ಟ್ ಹಾಕಿ ತೆರಳಿದ ನಡಿಗೆ ಸದಸ್ಯರು, ಏಕತೆಯ ದನಿ ಮೊಳಗಿಸಿದರು. ಇದು ನಡಿಗೆ ಹಾದುಹೋದ ಮಾರ್ಗದಲ್ಲಿ ಸಾರ್ವಜನಿಕರ ಗಮನ ಸೆಳೆಯಿತು.
ಕೆ.ಎಸ್. ಈಶ್ವರಪ್ಪ ಅವರೊಂದಿಗೆ ರೈತ ಮೋರ್ಚಾ ರಾಜ್ಯಾಧ್ಯಕ್ಷ ಆರಗ ಜ್ಞಾನೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಡಿ.ಎಸ್.ಅರುಣ್, ಎಸ್.ದತ್ತಾತ್ರಿ, ಮಧುಸೂಧನ್, ಚನ್ನಬಸಪ್ಪ, ಹಿರಿಯಣ್ಣ ಮತ್ತಿತರರು ಓಟದ ಕಾರ್ಯಕ್ರಮದ ಮುಂಚೂಣಿಯಲ್ಲಿದ್ದರು.
ಈ ಓಟ ಗಿನ್ನೆಸ್ ದಾಖಲೆಯಾಗುವ ಎಲ್ಲಾ ಸಾಧ್ಯತೆಗಳೂ ಇರುವ ಕಾರಣ, ಅದಕ್ಕಾಗಿ ಎಲ್ಲ ಏರ್ಪಾಡು ಮಾಡಿಕೊಳ್ಳಲಾಗಿತ್ತು. ಓಟ ಹಾಗೂ ನಡಿಗೆಯ ಆರಂಭದಿಂದ ಅಂತ್ಯದವರೆಗೆ ಭಾಗವಹಿಸಿದವರ ನೋಂದಣಿ ಹಾಗೂ ವಿಡಿಯೋ ಚಿತ್ರೀಕರಣ ನಡೆಯಿತು. ಜೊತೆಗೆ ನೋಟರಿಯವರಿಂದ ಅಧಿಕೃತ ದೃಢೀಕರಣವೂ ನಡೆಯಿತು.
ಶಾಂತಿ ವಾತಾವರಣ: ಬಿಜೆಪಿ ಜಿಲ್ಲಾಧ್ಯಕ್ಷ ಆಯನೂರು ಮಂಜುನಾಥ್ ಮಾತನಾಡಿ, ಶಾಂತಿ ಮತ್ತು ಐಕ್ಯತೆಯಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಪಟೇಲರು ನಂಬಿದ್ದರು. ಆದರೀಗ ಅಶಾಂತಿ ವಾತಾವರಣ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.