ಶಿವಮೊಗ್ಗ

ಬಾಲಕಾರ್ಮಿಕ ಪದ್ಧತಿ ನಿವಾರಣೆಗೆ ವರ್ತಕರ ಸಹಕಾರ ಅವಶ್ಯ: ನ್ಯಾ.ಅನಿತಾ

Published On :

ಸೊರಬ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ನಿಟ್ಟಿನಲ್ಲಿ ವರ್ತಕರ ಸಹಕಾರ ಅಗತ್ಯವಿದೆ ಎಂದು ನ್ಯಾ. ಜಿ. ಅನಿತಾ ತಿಳಿಸಿದರು.
ತಾಲೂಕು ಆನವಟ್ಟಿಯ ವಿಶ್ವಭಾರತಿ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ವರ್ತಕರ ಸಂಘ ಹಾಗೂ ವಿಶ್ವಭಾರತಿ ಟ್ರಸ್ಟ್ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲರಾದ ಇಂದುಧರ ಒಡೆಯರ್, ವೈ.ಜಿ. ಪುಟ್ಟಸ್ವಾಮಿ, ಸುಧಾಕರ ಪಿ. ನಾಯ್ಕ, ನಾಗರಾಜ್ ಕ್ರಮವಾಗಿ ಹೆಣ್ಣು ಮಕ್ಕಳಿಗೆ ಆಸ್ತಿಯ ಹಕ್ಕು, ಗ್ರಾಹಕರ ಹಕ್ಕು ಕಾಯಿದೆ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯಿದೆ. ಜನನ, ಮರಣ ಕಾಯಿದೆ ವಿಷಯಗಳ ಕುರಿತು ಉಪನ್ಯಾಸ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ತಮ್ಮಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಡಿ. ಮಾಂಗಲಿ, ಪಿಎಸ್‌ಐ ಜಗನ್ನಾಥ್, ವರ್ತಕರ ಸಂಘದ ಉಪಾಧ್ಯಕ್ಷ ಬಸವರಾಜ್ ಹಾವೇರಿ, ವಿಶ್ವಭಾರತಿ ಟ್ರಸ್ಟ್ ಕಾರ್ಯದರ್ಶಿ ಸಂಜಯ್ ಡೋಂಗ್ರೆ, ವರ್ತಕರು ಮತ್ತಿತರರು ಇದ್ದರು.
ವಿದ್ಯಾ, ವೈಷ್ಣವಿ ಪ್ರಾರ್ಥಿಸಿದರು. ವಿಜಯ್ ಟೇಂಬೆ ಸ್ವಾಗತಿಸಿದರು. ರುದ್ರಪ್ಪ ವಕೀಲ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.