ಶಿವಮೊಗ್ಗ

ಅಕ್ರಮ ಗೋ ಮಾರಾಟ: ಸೂಕ್ತ ಕ್ರಮಕೈಗೊಳ್ಳಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ.17 ಜಿಲ್ಲೆಯಲ್ಲಿ ಅಕ್ರಮವಾಗಿ ಗೋವುಗಳ ಮಾರಾಟವಾಗುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಗೋಸೇವಾ ಆಯೋಗ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯೋಗದ ಸದಸ್ಯ ಡಾ. ಎಸ್.ಕೆ. ಮಿತ್ತಲ್, ರಾಜ್ಯದಲ್ಲಿ ಹೆಚ್ಚಾಗಿ ಮಲೆನಾಡು ಗಿಡ್ಡ, ಅಮೃತ ಮಹಲ್, ಹಲ್ಲಿಕರ್ ಸೇರಿದಂತೆ ಹತ್ತಾರು ತಳಿಗಳು ಕಂಡುಬರುತ್ತವೆ. ಆಯೋಗ 2008 ರಲ್ಲಿ ನಡೆಸಿದ ಸರ್ವೆಯಲ್ಲಿ 105 ಲಕ್ಷ ಹಸು ಹಾಗೂ 43.26 ಲಕ್ಷ ಎಮ್ಮೆಗಳಿವೆ ಎಂದು ತಿಳಿದು ಬಂದಿವೆ ಎಂದು ವಿವರಿಸಿದರು.
ಕಾನೂನು ಬಾಹಿರ ಮಾರಾಟ: ಇದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 7 ತಾಲೂಕುಗಳಿಂದ 4,98,562 ದೇಶಿತಳಿಗಳು, 80,692 ಕ್ರಾಸ್ ಬ್ರಿಡ್ ತಳಿಗಳು ಮತ್ತು 1,91, 147 ಎಮ್ಮೆಗಳಿವೆ. ಶಿವಮೊಗ್ಗ, ಸಾಗರ, ಶಿಕಾರಿಪುರ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಹಸು, ಎಮ್ಮೆ ಮಾರಾಟ ಮಾಡಲಾಗುತ್ತಿದೆ ಎಂದರು.
ಅಕ್ರಮ ಮಾರಾಟ: ಶಿವಮೊಗ್ಗದಿಂದ ದಕ್ಷಿಣ ಕನ್ನಡ ಜಿಲ್ಲೆ ಮೂಲಕ ಕೇರಳ ಮತ್ತು ಗೋವಾ ರಾಜ್ಯಗಳಿಗೆ ರವಾನೆಯಾಗುತ್ತಿವೆ. ಈ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಅಕ್ರಮವಾಗಿ ಮಾರಾಟವಾಗುತ್ತಿವೆ. ಆದರೆ, ಜಿಲ್ಲೆಯ 17 ಚೆಕ್‌ಪೋಸ್ಟ್‌ಗಳಲ್ಲಿ ಇದುವರೆಗೆ ಒಂದು ಪ್ರಕರಣ ಕೂಡ ದಾಖಲಾಗಿಲ್ಲ.
ನಂತರ ಮಾತನಾಡಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಈ ಕಾಯ್ದೆ ಹಾಗೂ ಸಮಿತಿಯ ಬಗ್ಗೆ ಸ್ಪಷ್ಟವಾದ ಮಾಹಿತಿ ಲಭ್ಯವಿರಲಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ, ಪೊಲೀಸ್ ಇಲಾಖೆಗೆ ಸೂಚನೆ ನೀಡುತ್ತೇನೆ. ತಕ್ಷಣ ವರದಿ ಸಲ್ಲಿಸುವಂತೆ ನಿರ್ದೇಶಿಸುತ್ತೇನೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ದಯಾಳ್, ಪಶು ವೈದ್ಯ ಇಲಾಖೆ ಅಧಿಕಾರಿಗಳು, ರಸ್ತೆ ಸಾರಿಗೆ ಅಧಿಕಾರಿಗಳು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.