ಶಿವಮೊಗ್ಗ

ಆತ್ಮಹತ್ಯೆಗೆ ಯತ್ನಿಸಿದ ರೈತ

Published On :

ಶಿವಮೊಗ್ಗ: ಟ್ರ್ಯಾಕ್ಟರ್ ಜಪ್ತು ಮಾಡಿದ್ದರಿಂದ ಬೇಸರಗೊಂಡ ರೈತನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಚನ್ನಗಿರಿ ತಾಲೂಕಿನ ಗುಳ್ಳಳ್ಳಿ ಗ್ರಾಮದಲ್ಲಿ ನಡೆದಿದ್ದು, ಇವರನ್ನು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ರೈತ ಈಗ ಅಪಾಯದಿಂದ ಪಾರಾಗಿ ಚೇತರಿಸಿಕೊಳ್ಳುತ್ತಿದ್ದಾರೆ.
 ತೀರ್ಥೇಶ್ ಆತ್ಮಹತ್ಯೆಗೆ ಪ್ರಯತ್ನಿಸಿದ ರೈತ. ಈತ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆ ಮಂಗಳವಾರ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಬಸವರಾಜಪ್ಪ, ಹಿರಿಯ ಮುಖಂಡ ಕಡಿದಾಳು ಶಾಮಣ್ಣ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ ರೈತನ ಆರೋಗ್ಯ ವಿಚಾರಿಸಿದರು.
ಇಂದು ಪ್ರತಿಭಟನೆ: ರೈತನು ಸಾಲದ ಕಂತನ್ನು ಕಟ್ಟುವುದಾಗಿ ಹೇಳಿದರೂ ಸಹ ಜಪ್ತಿ ಮಾಡಿದ್ದರಿಂದ ಆಕ್ರೋಶಗೊಂಡ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಬ್ಯಾಂಕಿನ ಎದುರು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದರು.
 ಎಚ್.ಆರ್. ಬಸವರಾಜಪ್ಪ, ಕಡಿದಾಳು ಶಾಮಣ್ಣ ಆಕ್ರೋಶ ವ್ಯಕ್ತಪಡಿಸಿ, ಬ್ಯಾಂಕ್‌ಗಳು ರೈತರ ಮೇಲೆ ಏಕಾಏಕಿ ಜಪ್ತಿ ಮಾಡುವುದು ಸರಿಯಲ್ಲ ಎಂದರು.

ಹಣ ವಸೂಲಿ: ಲಾಗಿನ್ ಸ್ಥಗಿತ
ಶಿವಮೊಗ್ಗ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ 59 ಪಡಿತರ ಚೀಟಿ ಸೇವಾ ಕೇಂದ್ರಗಳಿಗೆ ಸಾರ್ವಜನಿಕರಿಂದ ಹೊಸತಾಗಿ ಆನ್‌ಲೈನ್‌ನಲ್ಲಿ ಪಡಿತರ ಚೀಟಿ ಸ್ವೀಕರಿಸಲು ಲಾಗಿನ್ ನೀಡಲಾಗಿತ್ತು.
ಇಂತಹ ಪಡಿತರ ಚೀಟಿ ಸೇವಾಕೇಂದ್ರಗಳಲ್ಲಿ ಸಾರ್ವಜನಿಕರಿಂದ ಅಗತ್ಯಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆ ಆಯುಕ್ತರು ನಗರದ ಮೂರು ಪಡಿತರ ಚೀಟಿ ಸೇವಾ ಕೇಂದ್ರಗಳನ್ನು ಹೊರತುಪಡಿಸಿ ಉಳಿದ 56 ಕೇಂದ್ರಗಳ ಲಾಗಿನ್ ಅನ್ನು ಡಿ. 16ರಿಂದ ಸ್ಥಗಿತಗೊಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.