ಶಿವಮೊಗ್ಗ

ಸುಪ್ರೀಂಗೆ ನೀಡಿರುವ ವರದಿ ಹಿಂಪಡೆಯಿರಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ.17 ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಸುಪ್ರೀಂ ಕೋರ್ಟ್‌ಗೆ ನೀಡಿರುವ ವರದಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಧ್ಯಕ್ಷ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ನಿಷೇಧ ಮಾಡುವುದರಿಂದ ರಾಜ್ಯದ ಅಡಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಒಂದು ವೇಳೆ ಅಡಕೆ ನಿಷೇಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ ಬೆಳೆಗಾರರು ಬೀದಿಗೆ ಬಿಳಲಿದ್ದಾರೆ ಎಂದರು.
ಸಮಜಾಯಿಷಿ: ಈ ಹಿಂದೆ ಗುಟ್ಕಾ ನಿಷೇಧವಾದಾಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಗುಟ್ಕಾ ನಿಷೇಧ ಮಾಡಬೇಕಾಯಿತು ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದರು. ಅದೇ ರೀತಿ ಇದೀಗ ಅಡಕೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಅಡಕೆ ಬೆಳೆಯನ್ನು ನಿಷೇಧಿಸಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದಲ್ಲಿ ಆಗ ಸಹ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಡಕೆಯನ್ನು ನಿಷೇಧ ಮಾಡಿಲ್ಲ. ಇದು ಸುಪ್ರೀಂ ಕೋರ್ಟ್ ತೀರ್ಪು ಎಂದು ಸಮಜಾಯಿಸಿ ನೀಡುತ್ತದೆ ಎಂದು ತಿಳಿಸಿದರು.
ಈ ಹಿಂದೆ ವಾದ ಮಂಡಿಸಲು ಸರ್ಕಾರ ವಕೀಲರನ್ನು ನೇಮಿಸಿದ್ದು, ಇದೀಗ ವಕೀಲರನ್ನು ಹಿಂಪಡೆಯಲಾಗಿದೆ.
 ಇದರಿಂದಾಗಿ ಬೆಳೆಗಾರರ ವಿರುದ್ಧ ತೀರ್ಪು ಬಂದರೂ ಆಶ್ಚರ್ಯಪಡಬೇಕಿಲ್ಲ. ಹೀಗಾಗಿ ಕೂಡಲೇ ಸರ್ಕಾರ ವಕೀಲರನ್ನು ನೇಮಕ ಮಾಡಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.