ಶಿವಮೊಗ್ಗ

ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಡಿ.18
ಟ್ರ್ಯಾಕ್ಟರ್ ಜಫ್ತಿ ಮಾಡಿದ್ದರಿಂದ ನೊಂದ ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್‌ವೊಂದರ ಎದುರು ರೈತ ಸಂಘದ ಪ್ರಮುಖರು, ಕಾರ್ಯಕರ್ತರು ಬುಧವಾರ ಧರಣಿ ನಡೆಸಿದರು.
ಚನ್ನಗಿರಿ ತಾಲೂಕು ಗುಳ್ಳಹಳ್ಳಿ ಗ್ರಾಮದ ಎಚ್.ಡಿ.ತೀರ್ಥಪ್ಪ ಬೆಳೆ ನಷ್ಟದ ಕಾರಣ ಬ್ಯಾಂಕಿನ ಕಂತು ಪಾವತಿಸಿರಲಿಲ್ಲ. ಹೀಗಾಗಿ, ಬ್ಯಾಂಕು ಸೀಜಿಂಗ್ ಏಜೆನ್ಸಿ ಮೂಲಕ ಟ್ರ್ಯಾಕ್ಟರ್ ಜಫ್ತಿ ಮಾಡಿದ್ದರು. ಖಾಸಗಿ ಏಜೆನ್ಸಿ, ಗೂಂಡಾಗಳು, ಸೀಜಿಂಗ್ ಏಜೆನ್ಸಿಗಳನ್ನು ಸಾಲ ವಸೂಲಾತಿಗೆ ಬ್ಯಾಂಕುಗಳು ಬಳಸಬಾರದೆಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಸೀಜಿಂಗ್ ಏಜೆನ್ಸಿ ಉಪಯೋಗ ಪಡೆದಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಯಿತು. ರೈತನ ಮೇಲೆ ಹಲ್ಲೆ ಮಾಡಿ ಟ್ರ್ಯಾಕ್ಟರ್ ಜಫ್ತಿ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬ್ಯಾಂಕಿನ ಕಾರಣದಿಂದಲೇ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈಗ ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರೋಪಿಸಿದರು.
ಬ್ಯಾಂಕಿನ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕೂಡಲೇ ಟ್ರ್ಯಾಕ್ಟರನ್ನು ರೈತನ ವಶಕ್ಕೆ ಕೊಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಬಸವರಾಜಪ್ಪ, ಮುಖಂಡರಾದ ಕಡಿದಾಳು ಶಾಮಣ್ಣ, ವೈ.ಜಿ. ಮಲ್ಲಿಕಾರ್ಜುನ್, ಸತೀಶ್, ವಸಂತ ಕುಮಾರ್, ರುದ್ರೇಶ್, ಶಿವಮೂರ್ತಿ ಸೇರಿದಂತೆ ಹಲವರು ಇದ್ದರು. ನಂತರ ಪ್ರತಿಭಟನಾಕಾರರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.