ಶಿವಮೊಗ್ಗ

ಸಾಗರ ಬಂದ್ ಯಶಸ್ವಿ

Published On :

ಸಾಗರ: ಅಡಕೆ ಬೆಳೆ ನಿಷೇಧಿಸುವ ಕೇಂದ್ರ ಸರ್ಕಾರದ ಪ್ರಸ್ತಾಪ ಖಂಡಿಸಿ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘ ಬುಧವಾರ ಕರೆ ನೀಡಿದ್ದ ಸಾಗರ ಬಂದ್ ಯಶಸ್ವಿಯಾಯಿತು.
ಪಟ್ಟಣದ ಎಲ್ಲಾ ವ್ಯಾಪಾರ ವಹಿವಾಟು, ಹೊಟೇಲ್‌ಗಳುಸ್ಥಗಿತಗೊಂಡಿತ್ತು. ವಾಹನ ಸಂಚಾರ ವಿರಳವಾಗಿತ್ತು. ವ್ಯಾಪಾರಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆ: ಕೇಂದ್ರ ಸರ್ಕಾರದ ಅಡಕೆ ಬೆಳೆಗಾರರ ವಿರೋಧಿ ನೀತಿ ಖಂಡಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಗಾಂಧಿ ಮೈದಾನದಿಂದ ಆರಂಭಗೊಂಡ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕೇಂದ್ರದ ನೀತಿಯನ್ನು ತೀವ್ರವಾಗಿ ಖಂಡಿಸಿತು.
ಮೆರವಣಿಗೆಯಲ್ಲಿ ಅಡಕೆ ಉಳಿಸಿ, ಮಲೆನಾಡು ಉಳಿಸಿ, ಅಡಕೆ ನಿಷೇದ ಪ್ರಸ್ತಾಪ ಕೈಬಿಡಿ ಇಲ್ಲ ಬೆಳೆಗಾರರಿಗೆ ವಿಷ ಕೊಡಿ, ಅಡಕೆ ನಿಷೇಧ ನೀತಿಗೆ ಧಿಕ್ಕಾರ, ಯುಪಿಎ ಸರ್ಕಾರಕ್ಕೆ ಧಿಕ್ಕಾರ ಮುಂತಾದ ಘೋಷಣೆಗಳು ಮೊಳಗಿದವು. 5 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ರತಿಭಟನಕಾರರು ಪಾಲ್ಗೊಂಡಿದ್ದರು.
ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಗಾಂಧಿ ಮೈದಾನದಲ್ಲಿ ಸಭೆ ನಡೆಯಿತು. ಅಡಕೆ ಬೆಳೆಗಾರ ಸಂಸ್ಥೆಗಳ ಪ್ರಮುಖರು, ರಾಜಕೀಯ ಪಕ್ಷಗಳ ಪ್ರಮುಖರು, ರಕ್ಷಣಾ ವೇದಿಕೆ, ನಮೋ ಬ್ರಿಗೇಡ್, ವರ್ತಕರ ಸಂಘ, ವಕೀಲರ ಸಂಘ, ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.