ಇಂದಿನಿಂದ ಅಂತರಾಷ್ಟ್ರೀಯ ಸಮಾವೇಶ
ಶಿವಮೊಗ್ಗ: ಜವಾಹರಲಾಲ್ ನೆಹರೂ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಮತ್ತು ಅಸೋಸಿಯೇಷನ್ ಆಫ್ ಕಂಪ್ಯೂಟರ್ ಎಲೆಕ್ಟ್ರಾನಿಕ್ಸ್ ಆಂಡ್ ಎಲೆಕ್ಟ್ರಿಕಲ್ ಎಂಜಿನಿಯರ್ಸ್ ಸಹಭಾಗಿತ್ವದಲ್ಲಿ 3 ದಿನಗಳ ಅಂತಾರಾಷ್ಟ್ರೀಯ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮಲ್ಟಿಮೀಡಿಯಾ ಪ್ರೊಸೆಸಿಂಗ್, ಕಮ್ಯುನಿಕೇಷನ್ ಅಂಡ್ ಇನ್ಫರ್ಮೇಶನ್ ಟೆಕ್ನಾಲಜಿ-2013 ಸಮಾವೇಶ 19ರಿಂದ 21ರವರೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ.
ಕಳೆದ ಕೆಲವು ವರ್ಷಗಳಿಂದ ಬಹುಮಾಧ್ಯಮ ಸಂಸ್ಕರಣೆ (ಮಲ್ಟಿ ಮೀಡಿಯಾ ಪ್ರೊಸೆಸಿಂಗ್) ಒಂದು ಬಹುಮುಖ್ಯ ತಂತ್ರಜ್ಞಾನವಾಗಿ ಬೆಳೆದಿದೆ. ದೃಶ್ಯ, ಶ್ರವಣ, ಗ್ರಾಫಿಕ್ಸ್, ವೀಡಿಯೋ, ಅನಿಮೇಶನ್ ಮತ್ತು ಪಠ್ಯಗಳನ್ನು ಬೆಸೆಯುವ ತಂತ್ರಜ್ಞಾನವಾಗಿದೆ.
ಉತ್ತಮ ವೇದಿಕೆ; ಈ ತಂತ್ರಜ್ಞಾನ ವಿವಿಧ ಮಾಹಿತಿ ಮೂಲಗಳಿಂದ ಬಹುಮಾಧ್ಯಮಗಳ ಮಾಹಿತಿಯನ್ನು ಪಡೆದು ವಿವಿಧ ಉದ್ದೇಶಗಳಿಗೆ ಬಳಸಲಾಗುತ್ತಿದೆ ಹಾಗಾಗಿ ಬಹಳಷ್ಟು ಸಂಶೋಧನೆ ನಡೆಯುತ್ತಿದೆ. ಈ ಸಮಾವೇಶ ಸಂಶೋಧಕರಿಗೆ ಅಧ್ಯಾಪಕರಿಗೆ, ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಒಂದು ವೇದಿಕೆಯಾಗಿರುತ್ತದೆ.
ಸಮಾವೇಶದ ಉದ್ಘಾಟನೆ 20ರಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಎಂಬಿಎ, ಎಂಸಿಎ ಸಭಾಂಗಣದಲ್ಲಿ ನಡೆಯಲಿದ್ದು, ಐಐಟಿ ಮದ್ರಾಸ್ ಪ್ರಾಧ್ಯಾಪಕ ಡಾ. ದೇವೇಂದ್ರ ಜಾಲಿಹಾಳ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಜಿ.ಎಸ್. ನಾಗಾರಾಜ್, ಸಹ ಕಾರ್ಯದರ್ಶಿ ಎನ್.ಟಿ.ನಾರಾಯಣ್ ರಾವ್ ಮುಖ್ಯ ಅತಿಥಿಯಾಗಿರುತ್ತಾರೆ. ಎನ್ಇಎಸ್ ಅಧ್ಯಕ್ಷ ಜಿ. ನಂಜುಂಡಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು.
ರಾಷ್ಟ್ರದ ವಿವಿಧ ಭಾಗಗಳಿಂದ 55 ವಿಜ್ಞಾನಿಗಳು, ಅಧ್ಯಾಪಕರು, ಸಂಶೋಧಕರು ಮತ್ತು ತಂತ್ರಜ್ಞರು ಸಮಾವೇಶದಲ್ಲಿ ಭಾಗವಹಿಸಿ ತಮ್ಮ ಸಂಶೋಧನಾ ಪ್ರಬಂಧ ಮಂಡಿಸಲಿದ್ದಾರೆ. ಸುಮಾರು 250 ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.
ರಾಮಕೃಷ್ಣ ಶಾಲೆ ಮಕ್ಕಳ ಸಾಧನೆ
ಶಿವಮೊಗ್ಗ: ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನದ ಅಂಗವಾಗಿ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀರಾಮಕೃಷ್ಣ ವಿದ್ಯಾನಿಕೇತನ ವಸತಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ದರ್ಶನ್ ಕುಮಾರ್ ಹೆಗಡೆ, ವೈ.ಎನ್.ಪ್ರಣವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

