ಇಎಸ್ಐ ಆಸ್ಪತ್ರೆ ಸ್ಥಾಪನೆಗೆ ಮನವಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ.19
ಶಿವಮೊಗ್ಗದಲ್ಲಿ ನೂರು ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಇಎಸ್ಐ ಆಸ್ಪತ್ರೆ ಸ್ಥಾಪಿಸುವಂತೆ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೇ, ಶಿವಮೊಗ್ಗ, ಭದ್ರಾವತಿ ಹಾಗೂ ಸಾಗರದಲ್ಲಿ ಇಎಸ್ಐ ಶುಶ್ರೂಷಾ ಕೇಂದ್ರ ಸ್ಥಾಪಿಸುವಂತೆಯೂ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿಯಾದ ಸಂಸದರು ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.
ಹಾಲಿ ಶಿವಮೊಗ್ಗದಲ್ಲಿ 50 ಸಾವಿರ ಇಎಸ್ಐ ಕಾರ್ಡುದಾರರಿದ್ದಾರೆ. ಈಗ ವೇತನ ಮಿತಿಯನ್ನು 25 ಸಾವಿರಕ್ಕೆ ಹೆಚ್ಚಿಸಿರುವುದರಿಂದ ಇನ್ನೂ 10 ಸಾವಿರ ಉದ್ಯೋಗಗಳು ಇಎಸ್ಐ ಸೌಲಭ್ಯಕ್ಕೆ ಅರ್ಹರಾಗಲಿದ್ದಾರೆ. ಈ ಮೂಲಕ ವಾರ್ಷಿಕ 3 ಕೋಟಿ ವಂತಿಕೆ ಸಲ್ಲಿಕೆಯಾಗುತ್ತಿದೆ. ಆದರೂ ಶಿವಮೊಗ್ಗದಲ್ಲಿ ಸುಸಜ್ಜಿತ ಇಎಸ್ಐ ಆಸ್ಪತ್ರೆ ಇಲ್ಲ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದಿದ್ದಾರೆ.
4 ಇಎಸ್ಐ ಕೇಂದ್ರ ಸ್ಥಾಪಿಸಿ: ಆಸ್ಪತ್ರೆ ಆರಂಭವಾಗುವವರೆಗೆ ತುರ್ತಾಗಿ ಇನ್ನಷ್ಟು ಖಾಸಗಿ ಆಸ್ಪತ್ರೆಗಳನ್ನು ಇಎಸ್ಐ ಸೇವಾ ವ್ಯಾಪ್ತಿಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಇನ್ನೂ ನಾಲ್ಕು ಇಎಸ್ಐ ಶುಶ್ರೂಷಾ ಕೇಂದ್ರಗಳನ್ನು ಆರಂಭಿಸಬೇಕು. ಜತೆಗೆ ಮಹಿಳಾ ವೈದ್ಯರನ್ನು ನೇಮಿಸಬೇಕು ಎಂದು ತಿಳಿಸಿದ್ದಾರೆ.
ಹಾಲಿ ಹುಬ್ಬಳ್ಳಿಯಲ್ಲಿರುವ ಉಪ ಪ್ರಾದೇಶಿಕ ಕಚೇರಿ 260 ಕಿ.ಮೀ. ದೂರವಿದೆ. ಜಿಲ್ಲೆಯಲ್ಲಿರುವ ಸಾವಿರಾರು ಕಾರ್ಮಿಕರಿಗೆ ಅನಾನುಕೂಲವಾಗುತ್ತಿದೆ. ಆದ್ದರಿಂದ ಉದ್ಯೋಗಿಗಳ ಬೇಡಿಕೆ ಪೂರೈಸುವುದಕ್ಕಾಗಿ ಶಿವಮೊಗ್ಗದಲ್ಲಿ ಉಪ ಪ್ರಾದೇಶಿಕ ಕಚೇರಿಯನ್ನು ಆರಂಭಿಸಬೇಕು ಎಂದು ಒತ್ತಾಯಿಸಿರುವ ಅವರು, ಕಾರ್ಮಿಕರ ಸಂಖ್ಯೆ ಹೆಚ್ಚಿರುವ ಭದ್ರಾವತಿಯಲ್ಲಿಯೂ ಸಹ ಶಾಖಾ ಕಚೇರಿ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

