ಪ್ರತಿಭಾ ಕಾರಂಜಿಯಿಂದ ಸಂಸ್ಕೃತಿ ಅರಿವು: ಜ್ಯೋತಿ
ಹೊಸನಗರ: ಸರ್ಕಾರದ ವತಿಯಿಂದ ಆಯೋಜನೆಗೊಂಡಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಕಲೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದು ಜಿಪಂ ಸದಸ್ಯೆ ಜ್ಯೋತಿ ಚಂದ್ರಮೌಳಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಪಟ್ಟಣದ ಶ್ರೀರಾಮಕೃಷ್ಣ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕಿರಿಯ- ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಉದ್ಘಾಟಿಸಿ, ಸುಪ್ತ ಪ್ರತಿಭೆಯ ಅನಾವರಣಕ್ಕಾಗಿ ಉತ್ತಮ ವೇದಿಕೆಯಾಗಿರುವ ಪ್ರತಿಭಾ ಕಾರಂಜಿಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪನವರು ಕನ್ನಡನಾಡು ಕಲೆ ಮತ್ತು ಸಂಸ್ಕೃತಿಯ ಬೀಡಾಗಿದ್ದು, ಸಂಸ್ಕೃತಿಯ ಸೊಬಗು ಮತ್ತು ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಿಕ್ಷಕರು ಪ್ರತಿಭಾ ಕಾರಂಜಿಯನ್ನು ಬಳಸಿಕೊಳ್ಳಬೇಕೆಂದು ತಿಳಿಸಿದರು.
ತಾಪಂ ಅಧ್ಯಕ್ಷೆ ನಾಗರಾತ್ನ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಗೀತಾ ನಿಂಗಪ್ಪ, ತಹಸೀಲ್ದಾರ್ ಸಿ.ಎಂ. ಕುಲಕರ್ಣಿ, ಶಿಕ್ಷಣ ಇಲಾಖೆ ಡಿ.ಆರ್. ಹಾಲಸಿದ್ದಪ್ಪ, ಎಂ. ಚಂದ್ರಪ್ಪ, ಕೆ.ಬಿ. ಈಶ್ವರಪ್ಪ, ಹೆಚ್.ಸಿ. ದೇವಾನಂದ, ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ರೇಣುಕಪ್ಪ, ಗಂಗಾನಾಯ್ಕ, ಕೆ.ಸಿ. ರತ್ನಾಕರ, ದುಗ್ಗಪ್ಪ, ಎಂ. ಬಸವಣ್ಯಪ್ಪ, ದೇವರಾಜ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

