ಶಿವಮೊಗ್ಗ

ಪ್ರಮೋದ್ ಮಳ್ಳಿಗಟ್ಟಿ ನಿಧನ

Published On :

ಶಿವಮೊಗ್ಗ:  ದಿ ಹಿಂದೂ ಪತ್ರಿಕೆಯ ವರದಿಗಾರರಾಗಿ ನಿವೃತ್ತರಾಗಿದ್ದ ಹಿರಿಯ ಪತ್ರಕರ್ತ ಪ್ರಮೋದ್ ಮಳ್ಳಿಗಟ್ಟಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು.  ಅವರಿಗೆ 65 ವರ್ಷ ವಯಸ್ಸಾಗಿದ್ದು, ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಹಲವು ದಶಕದಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಇತ್ತೀಚೆಗೆ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರ ರಾತ್ರಿ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಇವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ ಶಿವಮೊಗ್ಗದಲ್ಲಿ ನಡೆಯಲಿದೆ. ಇವರ ನಿಧನಕ್ಕೆ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಪತ್ರಿಕಾ ಸಂಸ್ಥೆಗಳು ಸಂತಾಪ ಸೂಚಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.