ಶಿವಮೊಗ್ಗ

ಸಮಾಜಮುಖಿ ಸಂಶೋಧನೆಗೆ ಆದ್ಯತೆ ಅವಶ್ಯ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ. 20
ಯಾವುದೇ ಸಂಶೋಧನೆಗಳು ಗಳಿಕೆಗಷ್ಟೇ ಸೀಮಿತವಾಗಬಾರದು. ಸಮಾಜಮುಖಿ ಆಗಿರಬೇಕು ಎಂದು ಚೆನ್ನೈ ಐಐಟಿಯ ಪ್ರಾಧ್ಯಾಪಕ ಡಾ. ದೇವೇಂದ್ರ ಜಾಲಿಹಾಳ್ ತಿಳಿಸಿದರು.
ಜೆಎನ್‌ಎನ್‌ಸಿಇ ಕಾಲೇಜಿನ ಎಂಬಿಎ, ಎಂಸಿಎ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಲ್ಟಿಮೀಡಿಯಾ ಪ್ರೊಸೆಸಿಂಗ್, ಕಮ್ಯುನಿಕೇಷನ್ ಅಂಡ್ ಇನ್‌ಫಾರ್ಮೇಶನ್ ಟೆಕ್ನಾಲಿಜಿ- 2013 ಅಂತರ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ವಿಶ್ವದಲ್ಲಿ ಅನೇಕ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಅವುಗಳ ಮೂಲ ಉದ್ದೇಶ ಸಮಾಜಕ್ಕೆ ಪೂರಕವಾಗಿರಬೇಕೆ ಹೊರತು ಹಣ ಗಳಿಸುವ ಉದ್ದೇಶ ಆಗಬಾರದು. ಇಂದು ಮಲ್ಟಿಮೀಡಿಯಾ ವಿಭಾಗದಲ್ಲಿ ಬಹಳಷ್ಟು ಸಂಶೋಧನೆಗಳು ನಡೆಯುತ್ತಿವೆ. ಈ ದಿಸೆಯಲ್ಲಿ ಯುವ ಜನಾಂಗ ಹೊಸ ಹೊಸ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಸಂಶೋಧನೆ ಎಂಬುದು ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ನಿರಂತರವಾಗಿ ನಡೆಯುತ್ತಿದೆ. ಹಾಗೆಯೇ ಪ್ರತಿ ಕ್ಷೇತ್ರದ ಸಂಶೋಧನೆಯೂ ಇನ್ನೊಂದು ಕ್ಷೇತ್ರದ ಸಂಶೋಧನೆಗೆ ಪೂರಕವಾಗಿರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಂಶೋಧನೆಯು ಕೇವಲ ಹಣ ಗಳಿಕೆ ಹಾಗೂ ಉದ್ಯೋಗ ಗಿಟ್ಟಿಸುವ ಸಲುವಾಗಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ವಿಷಾದಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸರಾವ್ ಕುಂಟೆ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ನಂಜುಂಡಪ್ಪ, ಉಪಾಧ್ಯಕ್ಷ ಜಿ.ಎಸ್. ನಾಗರಾಜ್, ಸಹ ಕಾರ್ಯದರ್ಶಿ ಎನ್.ಟಿ. ನಾರಾಯಣರಾವ್, ಪ್ರಾಧ್ಯಾಪಕ ಪ್ರೊ. ಸತ್ಯನಾರಾಯಣ, ನಿರ್ಮಲಾ ಶಿವಾನಂದ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.