ಶಿವಮೊಗ್ಗ

ಕಂದಾಯ ಅದಾಲತ್: 195 ಅರ್ಜಿ ತಿದ್ದುಪಡಿ

Published On :

ಹೊಸನಗರ: ಪ್ರತಿ ತಿಂಗಳು ನಡೆಯುವ ಕಂದಾಯ ಅದಾಲತ್ ಕಾರ್ಯಕ್ರಮವು ರೈತರಿಗೆ ವರದಾನವಾಗಿದೆ. ಈ ವರೆಗೆ  195 ಅಜರ್ ಪಡೆದಿದ್ದು ತಿದ್ದುಪಡಿಗಳಿಗೆ ಶಿಪಾರಸ್ಸು ಮಾಡಲಾಗಿದೆ ಎಂದು ಸಾಗರ ವಿಭಾಗ ಉಪ ವಿಭಾಗಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ತಿಳಿಸಿದರು.
 ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅದಾಲತ್‌ನಲ್ಲಿ ರೈತರು ತಮ್ಮ ಪಹಣಿ ತಿದ್ದುಪಡಿ, ಆಕಾರ್ ಬಂಧು ದುರಸ್ತಿ, ಆಸ್ತಿಗಳ ಸಮಗ್ರ ಮಾಹಿತಿಗಳನ್ನು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.  ತಹಸೀಲ್ದಾರ್ ಚಿದಂಬರ್ ಕುಲಕರ್ಣಿ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿದ್ದರು.
 ರುದ್ರಭೂಮಿ ಬೇಕು:   ತಾಲೂಕಿನ ಕಾರಣಗಿರಿ ಮತ್ತು ಅದರ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗುವಂತಹ ರುದ್ರಭೂಮಿಗೆ ಸ್ಥಳಾವಕಾಶ ಮಾಡಿಕೊಡಬೇಕು ಎಂದು ಕಾರಣಗಿರಿ ದತ್ತಾತ್ರೆಯ ಅಡಿಗ ಉಪವಿಭಾಗಾಧಿಕಾರಿಗಳಲ್ಲಿ ಮನವಿ ಮಾಡಿದರು.  ಈ ಬಗ್ಗೆ ಗ್ರಾಮ ಪಂಚಾಯತಿಗೆ ಕಾಲ ಕಾಲಕ್ಕೆ ಕೊಟ್ಟ ಮನವಿ ಪತ್ರ ಕಸದ ಬುಟ್ಟಿ ಸೇರಿದೆ. ಈ ಬಗ್ಗೆ ಸ್ಥಳಾವಕಾಶ ಮಾಡಿಕೊಡುವುದಲ್ಲದೇ ವಿದ್ಯುತ್ ಚಿತಾಗಾರ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.