ಶಿವಮೊಗ್ಗ

'ನೌಕರರ ಹಿತ ಕಾಪಾಡುವುದು ಸಂಘದ ಕರ್ತವ್ಯ'

Published On :

ಶಿಕಾರಿಪುರ: ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರಿಗಾಗಿ ಕೋಟ್ಯಂತರ ವೆಚ್ಚದ ಕಲ್ಯಾಣ ಮಂಟಪ, ರಿಯಾಯಿತಿ ದರದ ನಿವೇಶನ ಮತ್ತಿತರ ಯೋಜನೆಗೆ ಶೀಘ್ರ ಚಾಲನೆ ದೊರೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಷಡಕ್ಷರಿ ತಿಳಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನೂತನ ಸಂವತ್ಸರದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಳಿಸಿದ ನೌಕರರ ಹಿತ ಕಾಪಾಡುವುದು ಪ್ರಮುಖ ಕರ್ತವ್ಯವಾಗಿದ್ದು, ಈ ದಿಸೆಯಲ್ಲಿ ತಾಲೂಕು ಸಂಘದ ಸಹಕಾರದಿಂದ ಎಲ್ಲಾ ನೌಕಕರರ ಕಲ್ಯಾಣಕ್ಕಾಗಿ ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ 3 ಕೋಟಿ ವೆಚ್ಚದ ಕಲ್ಯಾಣ ಮಂಟಪ
ಕಾಮಗಾರಿಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದರು.
ಡಿ. 26 ಹಾಗೂ 27 ರಂದು ಆಡಳಿತ ಹಾಗೂ ಸುಧಾರಣಾ ಇಲಾಖೆ ವತಿಯಿಂದ ನೀಡಲಾಗುವ ಸರ್ವೋತ್ತಮ ಪ್ರಶಸ್ತಿಗೆ ಜಿಲ್ಲೆಯ 6 ಸದಸ್ಯರು ಆಯ್ಕೆಯಾಗಿರುವುದಾಗಿ ಹೆಮ್ಮೆ ವ್ಯಕ್ತಪಡಿಸಿದ ಅವರು ಜನವರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಒಗ್ಗಟ್ಟು ಪ್ರದರ್ಶಿಸಲು ಕರೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ ಮಾತನಾಡಿ, ಸಮಾಜಮುಖಿ ಕಾರ್ಯದ ಮೂಲಕ ಶಾಖೆ ಉತ್ತಮ ಹೆಸರು ಗಳಿಸಲು ಕಾರಣಕರ್ತರಾದ ಎಲ್ಲಾ ಸದಸ್ಯರ ಸಹಕಾರಕ್ಕೆ ಚಿರಋಣಿ ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಮೋಹನ್‌ಕುಮಾರ್, ಬೆಂಕಿ ಹನುಮಂತಪ್ಪ, ಮುರಳೀಧರ್, ಮಲ್ಲಿಕಾರ್ಜುನ್ ಮತ್ತಿತರರು ಹಾಜರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.