ಮೊಬೈಲ್ ಟವರ್ ಉದ್ಘಾಟನೆ
ತೀರ್ಥಹಳ್ಳಿ: ಮೃಗವಧೆ ಭಾಗದ ಜನರ ಬಹು ಬೇಡಿಕೆಯಾಗಿದ್ದ ಬಿಎಸ್ಎನ್ಎಲ್ ಮೊಬೈಲ್ ಸೇವೆ ಕೊನೆಗೂ ಕಾರ್ಯಾರಂಭ ಮಾಡಿದೆ.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಬಿಎಸ್ಎನ್ಎಲ್ ನೂತನ ಟವರ್ ಸೇವೆಯನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು. ಸುಮಾರು 10-12 ಗ್ರಾಮಗಳ ಮೂರು ಸಾವಿರಕ್ಕೂ ಅಧಿಕ ನಿವಾಸಿಗಳಿಗೆ ಅನುಕೂಲವಾಗಲಿದೆ.
ಅದರಲ್ಲೂ ಮೃಗವಧೆ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾಗಿದ್ದು, ವಾಹನ ಸೌಕರ್ಯಕ್ಕೆ ಕೊರತೆ ಇರುವುದರಿಂದ ಪ್ರವಾಸಿಗರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಮೊಬೈಲ್ ನೆಟ್ವರ್ಕ್ ಇಲ್ಲದ್ದರಿಂದ ತ್ರಾಸುಪಡುತ್ತಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಮೊಬೈಲ್ ಟವರ್ ಬೇಕೆಂಬುದು ಇಲ್ಲಿನ ಜನರ ಬಹು ದಿನಗಳ ಬೇಡಿಕೆಯಾಗಿತ್ತು. ಅದನ್ನು ಈಗ ಈಡೇರಿಸಿದಂತಾಗಿದ್ದು, ಅಧಿಕಾರಿಗಳ ಶ್ರಮ ಮೆಚ್ಚುವಂತದ್ದು ಎಂದರು.
ಸಂಸದ ರಾಘವೇಂದ್ರ ಹಾಗೂ ಆಯನೂರು ಮಂಜುನಾಥ್ ಅವರನ್ನು ದೇವಸ್ಥಾನ ಸಮಿತಿಯಿಂದ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಸಮಾರಂಭದಲ್ಲಿ ಬಿಎಸ್ಎನ್ಎಲ್ ಅಧಿಕಾರಿ ಕೃಷ್ಣಶರ್ಮ, ಗ್ರಾಪಂ ಅಧ್ಯಕ್ಷ ರಮೇಶ್, ಸತ್ಯಂದ್ರ ನಾಯಕ್, ಕೆ.ಜಿ. ಹಸನ್ ಕಟ್ಟೆಹಕ್ಲು ಉಪಸ್ಥಿತರಿದ್ದರು. ಸುಬ್ಬಣ್ಣ ಸ್ವಾಗತಿಸಿ, ಶಿವಕುಮಾರ್ ನಿರೂಪಿಸಿ, ವಂದಿಸಿದರು.
ಶ್ವಾನ ಪ್ರದರ್ಶನ
ಶಿವಮೊಗ್ಗ: ಶಿವಮೊಗ್ಗ ಕೆನಲ್ ಕ್ಲಬ್ ಡಿ. 29ರಂದು ಬೆಳಗ್ಗೆ 9ರಿಂದ ಸಂಜೆ 5ಗಂಟೆವರೆಗೆ ನಗರದ ಎನ್ಇಎಸ್ ಮೈದಾನದಲ್ಲಿ ರಾಜ್ಯ ಮಟ್ಟದ ಶ್ವಾನ ಪ್ರದರ್ಶನ ಏರ್ಪಡಿಸಿದೆ.
ರಾಜ್ಯದ ವಿವಿಧ ತಳಿಯ ಸುಮಾರು 300ಕ್ಕೂ ಅಧಿಕ ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ. ಸ್ಪರ್ಧೆಯಲ್ಲಿ ವಿಜೇತ ಶ್ವಾನಗಳಿಗೆ ಒಟ್ಟು 30 ಸಾವಿರ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಂದು ಶ್ವಾನಗಳಿಗೂ ಪ್ರಮಾಣಪತ್ರ ವಿತರಣೆ ಮಾಡಲಾಗುವುದು. ಆಸಕ್ತ ಶ್ವಾನ ಮಾಲೀಕರು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಕ್ಲಬ್ ಅಧ್ಯಕ್ಷ ಎನ್. ರಾಜೇಂದ್ರ ಕಾಮತ್ ತಿಳಿಸಿದ್ದಾರೆ. ವಿವರಗಳಿಗಾಗಿ ದೂ. 08182248399.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

