'ಮಿಜೋರಾಂ' ಸಮಾಧಾನಕರ ಬಹುಮಾನ
ಸೊರಬ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೋದಲ್ಲೆಲ್ಲಾ ಲಕ್ಷಾಂತರ ಜನರು ಸೇರುತ್ತಿದ್ದು, ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿ ಅಲೆ ದೇಶದ ತುಂಬೆಲ್ಲಾ ಇದೆ. ಭವ್ಯ ಭಾರತ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವುದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್ ತಿಳಿಸಿದರು. ಸೋಮವಾರ ಪಟ್ಟಣದ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಸಂದರ್ಭದಲ್ಲಿ ಅನೌಪಚಾರಿಕವಾಗಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಈ ಪೈಕಿ ನಾಲ್ಕು ರಾಜ್ಯದಲ್ಲಿ ಜಯಭೇರಿ ಪಡೆದು ದೇಶದ ತುಂಬೆಲ್ಲಾ ಬಿಜೆಪಿ ಅಲೆ ಇರುವುದನ್ನು ಸಾಬೀತು ಮಾಡಿದೆ. ಆದರೆ ಕೇವಲ ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದು ಸಮಾಧಾನಕರ ಬಹುಮಾನ ಪಡೆದಿದೆ ಎಂದು ವ್ಯಂಗ್ಯವಾಡಿದರು. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚಿಸಬೇಕು ಎಂದು ಅಖಂಡ ಭಾರತದ ಜನತೆ ಆಶಿಸುತ್ತಿದ್ದಾರೆ, ಇದಕ್ಕೆ ಶಕ್ತಿ ನೀಡಲು ಕಾರ್ಯಕರ್ತರೆಲ್ಲರೂ ಶ್ರಮವಹಿಸಬೇಕು ಎಂದು ಕರೆ ನೀಡಿದರು. ಮುಖಂಡ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ, ಅನಂತ ಕುಮಾರ್, ಆಯನೂರು ಮಂಜುನಾಥ್ ಇದ್ದರು. ಬಿಜೆಪಿ ತಾಲೂಕು ಅಧ್ಯಕ್ಷ ಹುಣವಳ್ಳಿ ಗಂಗಾಧರಪ್ಪ ಸ್ವಾಗತಿಸಿದರು. ಪದ್ಮನಾಭ, ನಾಗರಾಜ ಗೌಡ, ಎಂ. ನಾಗಪ್ಪ, ಪಾಣಿರಾಜಪ್ಪ, ಕಾರ್ಯದರ್ಶಿ ಡಿ. ಶಿವಯೋಗಿ, ಶ್ರೀಧರಾಚಾರ್ ಮೊದಲಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

