ಶಿವಮೊಗ್ಗ

ಬ್ಲಾಕ್ ಕಾಂಗ್ರೆಸ್ ನೂತನಪದಾಧಿಕಾರಿಗಳ ನೇಮಕ

Published On :

ಶಿರಾಳಕೊಪ್ಪ: ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಮತ್ತು ವಿವಿಧ ಪದಾಧಿಕಾರಿಗಳನ್ನು ಮಾಡುವ ಕುರಿತು ಪಕ್ಷದ ಮುಖಂಡರು ಸಭೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಅಧ್ಯಕ್ಷ ಮಲ್ಲೇನಹಳ್ಳಿ ಹನುಮಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಪ ಮಾಜಿ ಸದಸ್ಯ ಶಾಂತವೀರಪ್ಪ ಗೌಡ, ಜಿಲ್ಲಾ ಕಿಸಾನ್ ಸೆಲ್ ಅಧ್ಯಕ್ಷ ನಗರದ ಮಹದೇವಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಅರುಣ ಹಾಗೂ ಇತರ ಹಲವಾರು ಪ್ರಮುಖರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತ್ಯೇಕ ಸಭೆ: ಶಿರಾಳಕೊಪ್ಪ ಭಾಗದಲ್ಲಿ ಕಾಂಗ್ರೆಸ್ ಬಲಿಷ್ಠವಾಗಲು ಶಿರಾಳಕೊಪ್ಪ ಭಾಗದ ಸುಣ್ಣದಕೊಪ್ಪ ಹಾಗೂ ತೊಗರ್ಸಿ  ಭಾಗಗಳಲ್ಲಿ ಪತ್ಯೇಕ ಸಭೆ ನಡೆಸಬೇಕು. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರನ್ನು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಹಾಗು ಪಕ್ಷಸಂಘಟನೆಯಲ್ಲಿ ತೊಡಗುವಂತೆ  ಪ್ರಯತ್ನಿಸಬೇಕು ಎಂದರು.
ಶಿರಾಳಕೊಪ್ಪ ಪಟ್ಟಣದ ಬಗ್ಗೆ ವಿಶೇಷ ಗಮನಹರಿಸಿ ಪಟ್ಟಣಕ್ಕೆ ಪ್ರತ್ಯೇಕ ಅಧ್ಯಕ್ಷರನ್ನು ನೇಮಿಸಬೇಕು ಎಂದು ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾಗಿ ಜಿಲ್ಲಾ ಕಿಸಾನ್ ಸೆಲ್ ಅಧ್ಯಕ್ಷ ನಗರದ ಮಹದೇವಪ್ಪ ತಿಳಿಸಿದರು.
ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನ ಇದ್ದು, ಅವುಗಳನ್ನು ಬಗೆಹರಿಸವ ಕುರಿತು ಸಭೆಯಲ್ಲಿ ಚರ್ಚೆ ನಡೆದು ಪಕ್ಷವನ್ನು ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಸನ್ನದ್ಧಗೊಳಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಶಿರಾಳಕೊಪ್ಪ ಪಪಂ ಸದಸ್ಯರು, ಕಾರ್ಯಕರ್ತರು ಹಾಗೂ ಗ್ರಾಮಗಳಿಂದ ಆಗಮಿಸಿದ ಮುಖಂಡರು ಹಾಜರಿದ್ದು, ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.