ಶಿವಮೊಗ್ಗ

2 ಮನೆಗಳಲ್ಲಿ ಕಳ್ಳತನಕ್ಕೆ ಯತ್ನ

Published On :

ಸಾಗರ: ಪಟ್ಟಣದ ಎಸ್.ಎನ್. ನಗರ ಬಡಾವಣೆಯ ಎರಡು ಮನೆಗಳಲ್ಲಿ ಮಂಗಳವಾರ ರಾತ್ರಿ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಘಟನೆ ನಡೆದಿದೆ.
ಬಡಾವಣೆಯ ಆಶ್ರಮ ಶಾಲೆ ಹಿಂಭಾಗದಲ್ಲಿರುವ ತಹಸೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ ಅವರ ಮನೆಯ ಮುಂದಿನ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಮನೆಯನ್ನು ಜಾಲಾಡಿದ್ದಾರೆ. ಆದರೆ, ಯಾವುದೆ ವಸ್ತುಗಳನ್ನು ಕಳ್ಳತನ ಮಾಡಿಲ್ಲ. ತಹಸೀಲ್ದಾರ್ ಮತ್ತು ಕುಟುಂಬದವರು ಊರಿನಲ್ಲಿ ಇಲ್ಲದೆ ಇರುವ ಸಂದರ್ಭ ನೋಡಿ ಕಳ್ಳರು ಕಳ್ಳತನಕ್ಕೆ ಪ್ರಯತ್ನ ನಡೆಸಿದ್ದಾರೆ.
ಇದೇ ಬಡಾವಣೆಯ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಗೋಪಾಲಕೃಷ್ಣ ಶೇಟ್ ಎಂಬವರ ಮನೆಯ ಮುಂದಿನ ಚಿಲಕ ಮುರಿದು ಕಳ್ಳತನ ನಡೆಸಿದ್ದಾರೆ. ಮನೆಯವರು ಯಾರೂ ಇಲ್ಲದೆ ಇರುವುದರಿಂದ ಏನು ಕಳ್ಳತನವಾಗಿದೆ ಎನ್ನುವುದು ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೇಟೆಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಬಂದು ತನಿಖೆ ಕೈಗೊಂಡಿದ್ದಾರೆ.

ನಾಳೆ ಬಂಜಾರ ಸಂಸ್ಕೃತಿ ಉತ್ಸವ
ಕ.ಪ್ರ.ವಾರ್ತೆ, ಚನ್ನಗಿರಿ, ಡಿ. 25
ಬಂಜಾರ ಜನಾಂಗ ತನ್ನದೇ ಆದ ಸಂಸ್ಕೃತಿ, ಭಾಷೆ, ಗುರುಪರಂಪರೆ, ಕಲೆ, ಸಾಹಿತ್ಯ ಹೀಗೆ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಕೊಡುಗೆ ನೀಡುತ್ತಿದ್ದು, ಇಂತಹ ಹಿನ್ನೆಲೆ ಇರುವ ಜನಾಂಗದ ಸಂಸ್ಕೃತಿ ಉತ್ಸವವನ್ನು ಚನ್ನಗಿರಿ ಪಟ್ಟಣದಲ್ಲಿ ನಡೆಸಲು ಏರ್ಪಾಟು ಮಾಡಲಾಗಿದೆ ಎಂದು ತಾಲೂಕು ಬಂಜಾರ ಸಂಘದ ಕಾರ್ಯದರ್ಶಿ ವೈ.ಡಿ. ಸುರೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.