ಶಿವಮೊಗ್ಗ

'ದೇಶ ಮೆಚ್ಚುವಂತೆ ಆಡಳಿತ ನೀಡಿದ ವಾಜಪೇಯಿ'

Published On :

ಕ.ಪ್ರ.ವಾರ್ತೆ  ಸಾಗರ  ಡಿ.25
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ತಾಲೂಕು ಬಿಜೆಪಿ ಘಟಕ ಬುಧವಾರ ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಬಿಜೆಪಿ. ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಒಡೆಯರ್ ಮಾತನಾಡಿ, ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿ ನೀಡಿದ ಆಡಳಿತ ಮಾದರಿಯಾಗಿತ್ತು. ಅಂತಹ ಆಡಳಿತ ಈತನಕ ನೋಡಲು ಸಾಧ್ಯವಾಗಿಲ್ಲ. ವಿಶ್ವಮಟ್ಟದಲ್ಲಿ ಭಾರತದ ಪ್ರತಿಷ್ಠೆ ಎತ್ತಿ ಹಿಡಿಯುವ ಮೂಲಕ ಎಲ್ಲರೂ ಮೆಚ್ಚುವ ಆಡಳಿತ ನೀಡಿದ ವಾಜಪೇಯಿ ಅವರ ಮುತ್ಸದ್ಧಿತನ ಇಂದಿನ ಯುವ ರಾಜಕಾರಣಿಗಳು ಪಾಲನೆ ಮಾಡಬೇಕು ಎಂದರು.
ವಾಜಪೇಯಿ ಅಪರೂಪದ ರಾಜಕಾರಣಿ ಎಂದ ಅವರು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮೂಲಕ ಗ್ರಾಮಾಂತರ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಚಾಲನೆ ಸಿಕ್ಕಿತ್ತು. ಇದರಿಂದ ಸಂಪರ್ಕ ಕ್ರಾಂತಿಗೆ ನಾಂದಿಯಾಯಿತು ಎಂದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶಕುಮಾರ್ ಮಾತನಾಡಿ, ಜನಸಂಘದ ಮೂಲಕ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ ವಾಜಪೇಯಿಯವರು ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ಶಿಷ್ಯರಾಗಿ ಸಾಮಾಜಿಕ ಹಾಗೂ ಪಕ್ಷ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ, ವಿದೇಶಾಂಗ ಸಚಿವರಾಗಿ, ಪ್ರಧಾನಮಂತ್ರಿಗಳಾಗಿ ಅವರು ದೇಶಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು. ಕೇಂದ್ರ ಸರ್ಕಾರ ವಾಜಪೇಯಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷತೆ ವಹಿಸಿದ್ದ ಚೇತನರಾಜ್ ಕಣ್ಣೂರು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎನ್ನುವುದು ವಾಜಪೇಯಿಯವರ ಕನಸಾಗಿತ್ತು. ಆ ಕನಸು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.