ಬಸ್ ತಂಗುದಾಣ ಸ್ಥಳಾಂತರಕ್ಕೆ ವಿರೋಧ
ಶಿವಮೊಗ್ಗ: ಪ್ರಭಾವಿಯೊಬ್ಬರು ನಿರ್ಮಿಸುತ್ತಿರುವ ಕಟ್ಟಡಕ್ಕೆ ಅಡ್ಡ ಇದೆ ಎಂಬ ಒಂದೇ ಕಾರಣದಿಂದ ಅನಗತ್ಯವಾಗಿ ಬಸ್ ನಿಲ್ದಾಣವನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ನಾಗರಿಕರ ವಿರೋಧ ವ್ಯಕ್ತವಾಗಿದೆ.
ಬಿ.ಎಚ್. ರಸ್ತೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಎದುರಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ಅನುದಾನದಲ್ಲಿ 3 ಲಕ್ಷ ವೆಚ್ಚ ಮಾಡಿ ನಿರ್ಮಿಸಿರುವ ಬಸ್ ತಂಗುದಾಣವನ್ನು ಸ್ಥಳಾಂತರಿಸಲು ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಿದಾಗ ಪ್ರತಿರೋಧ ವ್ಯಕ್ತಪಡಿಸಿದ ನಾಗರಿಕರು ಅವರನ್ನು ವಾಪಸು ಕಳುಹಿಸಿದ್ದಾರೆ. ಆಗ ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ವೀಕ್ಷಿಸಿದರು.
ಈ ತಂಗುದಾಣವನ್ನು ಕಟ್ಟಡಕ್ಕೆ ಅಡ್ಡಿ ಆಗುತ್ತದೆ ಎಂಬ ಕಾರಣದಿಂದ ಸ್ವಲ್ಪವೇ ದೂರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದರಿಂದ ಸ್ಥಳೀಯ ಆಡಳಿತಕ್ಕೆ ಅನಗತ್ಯವಾಗಿ 50 ಸಾವಿರ ಹೆಚ್ಚುವರಿ ಹೊರೆ ಬರುತ್ತಿದೆ. ಆದ್ದರಿಂದ ಯಾವ ಕಾರಣಕ್ಕೂ ಸ್ಥಳಾಂತರಿಸಬಾರದು. ಹಾಲಿ ಇರುವ ಸ್ಥಳದಲ್ಲಿಯೇ ಬಸ್ ತಂಗುದಾಣ ಇದ್ದರೆ ಪ್ರಯಾಣಿಕರಿಗಾಗಲಿ, ಬಸ್ಸುಗಳನ್ನು ನಿಲ್ಲಿಸುವುದಕ್ಕಾಗಲಿ ಯಾವುದೇ ತೊಂದರೆ ಇಲ್ಲ ಎಂದು ಶಾಸಕರ ಗಮನಕ್ಕೆ ತಂದರು.
ಆಗ ಶಾಸಕರು ಬಸ್ ತಂಗುದಾಣವನ್ನು ಸ್ಥಳಾಂತರಿಸಲು ಅವಕಾಶ ಕೊಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾಮಾಜಿಕ ಕಾರ್ಯಕರ್ತ ಮಹೇಶ್ ನೀತಿಗೆರೆ ಅವರು ಈ ಕುರಿತು ಪ್ರತಿಕ್ರಿಯಿಸಿ, ಸಾರ್ವಜನಿಕರ ತೆರಿಗೆ ಹಣದಿಂದ ಸ್ಥಾಪಿಸಿರುವ ಬಸ್ ತಂಗುದಾಣವನ್ನು ಸ್ಥಳಾಂತರಿಸುವುದಕ್ಕೆ ನಮ್ಮ ವಿರೋಧವಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

