ಶಿವಮೊಗ್ಗ

ಹ್ಯಾಂಡ್ ಬಾಲ್: ಜ್ಞಾನದೀಪ ಶಾಲೆ ದ್ವಿತೀಯ

Published On :

ಶಿವಮೊಗ್ಗ: ಉತ್ತರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ಸಿಬಿಎಸ್‌ಇ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಜ್ಞಾನದೀಪ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಹೊಸ ಸಾಧನೆಯನ್ನು ಮಾಡಿದ್ದಾರೆ.
ಹದಿನಾಲ್ಕು ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಜ್ಞಾನದೀಪ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅತಿಥೇಯ ತಂಡದ ವಿರುದ್ಧ ಆಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಈ ಪಂದ್ಯವು ಉತ್ತರ ಪ್ರದೇಶದ ಡಫ್‌ಡಿಲ್ ಪಬ್ಲಿಕ್ ಸ್ಕೂಲ್, ಮಿರ್ಜಾಪುರ ಇವರ ಸಹಯೋಗದೊಂದಿಗೆ ಆಯೋಜನೆಗೊಂಡಿತ್ತು.
ಈ ಕ್ರೀಡಾಕೂಟದಲ್ಲಿ ನಲವತ್ತೊಂದು ತಂಡಗಳು ಭಾಗವಹಿಸಿದ್ದವು. ಉತ್ತರಪ್ರದೇಶದಲ್ಲಿ ಕೊರೆಯುವ ಚಳಿ ಇದ್ದರೂ ಅದರಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನಗಳಿಸಿದ ಎಲ್ಲಾ ಕ್ರೀಡಾಪಟುಗಳಿಗೆ, ದೈಹಿಕ ಶಿಕ್ಷಕರಿಗೆ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಆಡಳಿತ ಮಂಡಳಿಯವರು ಶುಭಾಶಯಗಳನ್ನು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.