ಶಿವಮೊಗ್ಗ

ಸಂಕ್ರಾಂತಿಗೆ ಗೊಂದಲ ನಿವಾರಣೆ

Published On :

ಶಿವಮೊಗ್ಗ: ಬಿಜೆಪಿ-ಕೆಜೆಪಿ ಕುರಿತಾಗಿ ಕೊನೆಗೂ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ಹೊರಹಾಕಿದ್ದು, ಕಳೆದ ಐದಾರು ತಿಂಗಳಿನಿಂದ ಕೇಳಿ ಬರುತ್ತಿರುವ ಬಿಜೆಪಿ- ಕೆಜೆಪಿಯ ಕುರಿತಾಗಿನ ಗೊಂದಲ ಈ ವರ್ಷದಲ್ಲೇ ಬಗೆಹರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಸಂಕ್ರಾಂತಿ ವೇಳೆಗೆ (ಜ.15) ಎಲ್ಲ ಸಂಗತಿಗಳು ನಿಚ್ಚಳವಾಗಲಿವೆ. ಈ ಬಗ್ಗೆ ಪಕ್ಷದೊಳಗೂ ಸಹ ಸಾಕಷ್ಟು ಚರ್ಚೆ ನಡೆದಿವೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಕೇತ್ರದಲ್ಲಿ ಸ್ಪರ್ಧಿಸುವ ಕುರಿತಂತೆ ಯಾವುದೇ ಮಾತುಕತೆ ನಡೆಸಿಲ್ಲ. ನನಗೆ ಶಿಕಾರಿಪುರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆಯೂ ಯಾವುದೇ ಸೂಚನೆ ನೀಡಿಲ್ಲ ಎಂದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿರುವುದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಅವರು ನಮ್ಮ ಹಿಂದಿನ ಪಕ್ಷದ ಪ್ರಮುಖರು. ನಮ್ಮದೇ ಜಿಲ್ಲೆಗೆ ಅಥಿತಿಯೊಬ್ಬರು ಆಗಮಿಸಿದಾಗ ಅವರನ್ನು ಭೇಟಿ ಮಾಡಿ ಮಾತನಾಡಿಸುವುದು ನಮ್ಮ ಕರ್ತವ್ಯ. ಹೀಗಾಗಿ ನಾನು, ನಮ್ಮ ತಂದೆ ಭೇಟಿ ಮಾಡಿದೆವು. ಬೇರೆ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.