ಎಳ್ಳಮಾವಾಸ್ಯೆಗೆ ಸಕಲ ಸಿದ್ಧತೆ
ತೀರ್ಥಹಳ್ಳಿ : ತೀರ್ಥಹಳ್ಳಿ ಆರಾಧ್ಯದೈವ ರಾಮೇಶ್ವರ ದೇವರ ರಥೋತ್ಸವ, ಎಳ್ಳವಮಾಸ್ಯೆ ಜಾತ್ರೆಗೆ ಭರದ ಸಿದ್ಧತೆಗಳು ನಡೆದಿದ್ದು, 7 ದಿನಗಳ ಪರ್ಯಂತ ಈ ಜಾತ್ರೆ ನಡೆಯಲಿದೆ. ಪುರಾಣ ಪ್ರಸಿದ್ಧ ಎಳ್ಳವಮಾಸ್ಯೆಯ ಜ.1, ಬುಧವಾರ ನೆರವೇರಲಿದೆ. ಪರಶುರಾಮ ತೀರ್ಥಪೂಜೆ, ತೀರ್ಥಾಭಿಷೇಕ ಮತ್ತು ತೀರ್ಥಸ್ನಾನ ನಡೆಯಲಿದೆ. ಜ.2ರಂದು ಅಭಿಜಿನ್ ಮುಹೂರ್ತದಲ್ಲಿ ರಾಮೇಶ್ವರ ದೇವರ ರಥೋತ್ಸವ ನಡೆಯಲಿದೆ. ಜ.3ರಂದು ತೆಪ್ಪೋತ್ಸವ ಏರ್ಪಡಿಸಲಾಗಿದೆ.
ಅನ್ನ ಸಂತರ್ಪಣೆ: ಜಾತ್ರಾ ಮಹೋತ್ಸವದ 3 ದಿನಗಳ ಕಾಲ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ ಅನ್ನದಾಸೋಹ ಮಿತ್ರವೃಂದದ ವತಿಯಯಿಂದ ಎಳ್ಳವಮಾಸ್ಯೆ, ರಥೋತ್ಸವ ಹಾಗೂ ತೆಪ್ಪೋತ್ಸವ ದಿನಗಳಂದು ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಈ ಅನ್ನ ದಾಸೋಹ ಇರುತ್ತದೆ. ಈ ಸೇವೆಗಾಗಿ ಸಾರ್ವಜನಿಕರಿಂದ ಹಸಿರು ಕಾಣಿಕೆಯನ್ನುಸ್ವೀಕರಿಸಲಾಗುತ್ತದೆ.
ಪ್ರತಿಭಾ ಕಾರಂಜಿ ಉದ್ಘಾಟನೆ
ಶಿವಮೊಗ್ಗ, ಡಿ.30 ಸರ್ಕಾರ ಮಕ್ಕಳ ಕಲಿಕೆಗಾಗಿ ಆಯೋಜಿಸಿರುವ ಪ್ರತಿಭಾ ಕಾರಂಜಿಯನ್ನು ಕಾರ್ಯಕ್ರಮಗಳು ಇಂದು ನೆಪಮಾತ್ರಕ್ಕೆ ನಡೆಯುತ್ತಿವೆ ಎಂದು ವಿಪ ಸಭಾಪತಿ ಡಿ.ಎಚ್. ಶಂಕರಮೂರ್ತಿ ಬೇಸರ ವ್ಯಕ್ತಪಡಿಸಿದರು.
ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸೋಮವಾರ ಬಿ.ಎಚ್. ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.
ಶಾಸಕಿ ಶಾರದಾ ಪೂರ್ಯಾನಾಯ್ಕ್, ಇಂತಹ ಸೂಕ್ತ ವೇದಿಕೆಯನ್ನು ಬಳಸಿಕೊಂಡು ಶಿಕ್ಷಕರು ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದರು. ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜನ, ಉಪಾಧ್ಯಕ್ಷೆ ಹೇಮಾಪಾವನಿ ಶ್ರೀನಿವಾಸ, ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ, ಸಸಿಕಾಂತ್ ಸೆಂಥಿಲ್, ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಸಿ. ಬಸವರಾಜಪ್ಪ, ಶಿಕ್ಷಣಾಧಿಕಾರಿ ಗಣಪತಿ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

