ಕುಡಿವ ನೀರಿನ ಸರಬರಾಜಿನಲ್ಲಿ ವ್ಯತ್ಯಯ
ಶಿವಮೊಗ್ಗ: ಡಿ.30ರಂದು ವಿದ್ಯುತ್ ಮಾರ್ಗಗಳ ದುರಸ್ತಿಗಾಗಿ ಕೃಷ್ಣರಾಜೇಂದ್ರ ನೀರು ಶುದ್ದೀಕರಣ ಕೇಂದ್ರಕ್ಕೆ ಮತ್ತು ಗಾಜನೂ ರು ನೀರು ಸರಬ ರಾಜು ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ನಗರದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಲಿದೆ. ಡಿ. 31ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸಮಿತಿಗೆ ಆಯ್ಕೆ
ಶಿವಮೊಗ್ಗ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಜಿಲ್ಲಾಧ್ಯಕ್ಷರಾಗಿ ಮುಲ್ಲಾ ಅಬ್ದುಲ್ ವಹಾಬ್,ಕಾರ್ಯದರ್ಶಿ ಶಿರಾಜ್ ಅಹ್ಮದ್ ಖಾನ್, ಸಂಘಟನಾ ಕಾರ್ಯದರ್ಶಿ ಮುನೀರ್ ಅಹ್ಮದ್, ಖಜಾಂಚಿಯಾಗಿ ಅಬ್ದುಲ್ ಮುನಾಫ್ ನೇಮಕವಾಗಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಉಚಿತ ಪರೀಕ್ಷಾ ತರಬೇತಿ ಶಿಬಿರ
ಶಿವಮೊಗ್ಗ: ಕೆ.ಆರ್.ಪುರಂ ರಸ್ತೆಯಲ್ಲಿರುವ ರಾಯಲ್ ಪ್ರಿಂಟರ್ಸ್ ಎಸ್‌ಎಸ್‌ಎಲ್ ಸಿ ಬಡ ವಿದ್ಯಾರ್ಥಿಗಳಿಗಾಗಿ ಉಚಿತ ವಿಶೇಷ ಪರೀಕ್ಷಾ ತರಬೇತಿ ಶಿಬಿರ ಹಮ್ಮಿಕೊಂಡಿದೆ. ಜ.2ರಂದು ಪ್ರತಿ ನಿತ್ಯ ಸಂಜೆ 5.45ರಿಂದ 7.30ರವರೆಗೆ ನಡೆಯಲಿದ್ದು, ಈ ತರಬೇತಿ ಶಿಬಿರಕ್ಕೆ ಆಯ್ದ 50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಎಲ್ಲಾ ಪಠ್ಯ ವಿಷಯಗಳಿಗೆ ಸಂಬಂಧಿಸಿದ ತರಬೇತಿ ನಡೆಯಲಿದ್ದು, ಅವಶ್ಯಕ ನೋಟ್ಸ್‌ಗಳನ್ನು ಉಚಿತವಾಗಿ ನೀಡಲಾಗುವುದು. ಆಸಕ್ತ ಹಾಗೂ ಅಂಕಗಳಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಿಂಟರ್ಸ್ ಸಂಚಾಲಕ ಎಂ. ಮಾಧವಾಚಾರ್ ತಿಳಿಸಿದ್ದಾರೆ. ವಿವರಗಳಿಗಾಗಿ- 9886273495 ಸಂಪರ್ಕಿಸಿ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

