ಇಂದಿನಿಂದ ಶಾಲಾಹಬ್ಬ
ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯ ರಾಮಕೃಷ್ಣ ವಿದ್ಯಾನಿಕೇತನ ವಸತಿ ಶಾಲೆಯಲ್ಲಿ ಜ.1 ರಿಂದ 3 ದಿನಗಳ ಕಾಲ ಶಾಲಾಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆ ಕಾರ್ಯದರ್ಶಿ ವೆಂಕಟರಮಣ ದಾವಣಿಬೈಲು ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಾತ್ಮದಲ್ಲಿ ವೈಜ್ಞಾನಿಕ ಶಿಕ್ಷಣ ಗುರುಕುಲ ಮಾದರಿ ಎಂಬ ಮಹತ್ವದ ಉದ್ದೇಶ ಇಟ್ಟುಕೊಂಡು ರಾಮಕೃಷ್ಣ ವಿದ್ಯಾನಿಕೇತನ ವಸತಿ ಶಾಲೆ ಕಾರ್ಯನಿರ್ವಹಿಸುತ್ತಿದೆ. 1ನೇ ತರಗತಿಯಿಂದಲೇ ಮಕ್ಕಳು ವೇದಿಕೆಯಲ್ಲಿ ಕಾಣುವ ಅವಕಾಶ ನಮ್ಮ ಶಾಲೆಯಲ್ಲಿದೆ. ಇದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯಲು ಸಾಧ್ಯವಾಗಿದೆ. ಪ್ರತಿವರ್ಷ 1,500ಕ್ಕೂ ಅಧಿಕ ಮಕ್ಕಳು ವೇದಿಕೆ ಹಂಚಿಕೊಳ್ಳಬೇಕು ಎನ್ನುವ ಕಾರಣಕ್ಕೆ 3 ದಿನಗಳ ಶಾಲಾಹಬ್ಬ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜ.1ರಂದು ಶಾಲಾ ಹಬ್ಬದ ಮೊದಲ ದಿನ ಸತ್ಯನಾರಾಯಣ ಪೂಜೆ ಮತ್ತು ಮಕ್ಕಳಲ್ಲಿ ಪೋಷಕರ ಬಗ್ಗೆ ಗೌರವ ಭಾವನೆ ಮೂಡಿಸುವ ದೃಷ್ಟಿಯಿಂದ ಪಾದಪೂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಬೆಳಗ್ಗೆ 10 ಗಂಟೆಗೆ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಆರ್.ಕೆ.ಸಿದ್ದರಾಮಣ್ಣ, ಜಿಪಂ ಸದಸ್ಯ ಕಲಗೋಡು ರತ್ನಾಕರ್, ಕಸಾಪ ಅಧ್ಯಕ್ಷ ಡಿ. ಮಂಜುನಾಥ್, ಸೂಡಾ ಆಯುಕ್ತ ಜನಾರ್ಧನ್, ಬಿಇಒ ಹಾಲಾನಾಯ್ಕ್ ಆಗಮಿಸಲಿದ್ದಾರೆ. ಕೂಡಲಿ ಕ್ಷೇತ್ರದ ಶ್ರೀಮದ್ ಜಗದ್ಗುರು ಡಾ. ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಡಾ. ಡಿ.ಆರ್. ನಾಗೇಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
ಜ.2 ರಂದು “_«Ú¥Ú ಮಗುವಿಗೆ ಅಂದದ OæàsÚßVæ’ ಕಾರ್ಯಕ್ರಮ ಬೆಳಗ್ಗೆ 9ಕ್ಕೆ ಆರಂಭವಾಗಲಿದ್ದು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಉದ್ಘಾಟನೆ ಮಾಡಲಿದ್ದಾರೆ.
ಜ.3 ರಂದು ಸಂಜೆ 5.30 ಗಂಟೆಗೆ ನಡೆಯುವ ವೈವಿಧ್ಯಮಯ ರಂಗೋತ್ಸವವನ್ನು ಪೂರ್ವವಲಯ ಐಜಿಪಿ ಡಾ. ಎಸ್.ಪರಶಿವಮೂರ್ತಿ ಉದ್ಘಾಟಿಸಲಿದ್ದು, ಡಿಡಿಪಿಐ ಬಸವರಾಜಪ್ಪ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಳಲಿ ಮಠದ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಸಂಸ್ಥೆ ಅಧ್ಯಕ್ಷ ಡಾ. ಡಿ.ಆರ್. ನಾಗೇಶ್, ಉಪನ್ಯಾಸಕ ಗಜೇಂದ್ರ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

