ಶಿವಮೊಗ್ಗ: ಫ್ರೆಂಡ್ಸ್ ಕ್ರಿಯೇಷನ್ ಅಸೋಸಿಯೇಷನ್ ನೆಹರು ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋಖೋ ಪಂದ್ಯಾವಳಿಯನ್ನು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶುಕ್ರವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಖೋಖೋ ಕ್ರೀಡೆಯಲ್ಲಿ ಸೋಮಾರಿತನ ಎಂಬುದಿಲ್ಲ. ಇಲ್ಲಿ ಶಕ್ತಿ, ಮತ್ತು ಸಾಮರ್ಥ್ಯ ಇದ್ದವರು ಮಾತ್ರ ಗೆಲ್ಲಲು ಸಾಧ್ಯ. ಆಟ ಹಾಡುವುದರೊಂದಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚು ಆಸಕ್ತಿ ವಹಿಸಿದರೆ ಎಂಎಲ್ಎ, ಉಪಮುಖ್ಯಮಂತ್ರಿ ಆಗಬಹುದು. ಕ್ರೀಡೆಗಳ ಸರ್ವಾಂಗಿಣ ಅಭಿವೃದ್ಧಿಗೆ ಸರ್ಕಾರ ಸಹಕರಿಸುತ್ತದೆ. ಖೋಖೋ ಪಂದ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ರಾಜ್ಯಕ್ಕೆ ಕೀರ್ತಿ ತರಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಡ ಅಧ್ಯಕ್ಷ ಗಿರೀಶ್ ಪಟೇಲ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಎಂ.ಕೆ. ಬಲದೇವಕೃಷ್ಣ, ಜ್ಯೋತಿಪ್ರಕಾಶ್, ಅರುಣ್, ಪಂದ್ಯಾವಳಿ ಸಂಘಟನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಇದ್ದರು.