ನಾಳೆ ಫೋನ್‌ಇನ್ ಕಾರ್ಯಕ್ರಮ

Updated on: 

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಹೃದಯಾಲಯದ ಡಾ. ಸುಧೀರ್ ಭಟ್ ಫೆ.5ರಂದು ಭದ್ರಾವತಿ ಆಕಾಶವಾಣಿ ರೇಡಿಯೋ ಪೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೃದಯ ರೋಗಕ್ಕೆ ಸಂಬಂಧಿಸಿದ ಮಾಹಿತಿ ನೀಡಲಿದ್ದು, ಕೇಳುಗರ ಪ್ರಶ್ನೆಗೆ ಉತ್ತರಿಸಲಿದ್ದಾರೆ. ವಿವರಗಳಿಗಾಗಿ 08282 2702282, 274900.
ಅವಧಿ ವಿಸ್ತರಣೆ
ಶಿವಮೊಗ್ಗ: ಪದವೀಧರರ ಸಹಕಾರ ಸಂಘ ನಿಯಮಿತದಲ್ಲಿ ನೀಡುತ್ತಿದ್ದ ಕೇಂದ್ರ ಸರ್ಕಾರದ ವಿಶೇಷ ಯೋಜನೆ ಆಧಾರ್ ಕಾರ್ಡ್ ವಿತರಣಾ ಸೌಲಭ್ಯವನ್ನು ಫೆ.10ರವರೆಗೆ ವಿಸ್ತರಿಸಲಾಗಿದೆ. ಸಂಘದ ಸದಸ್ಯರಿಗೆ ಮಾತ್ರ ಅವಕಾಶವಿದ್ದು, ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಈ ವೇಳೆ ಸಂಘದ ಗುರುತಿನ ಚೀಟಿ ಹಾಗೂ ವಾಸ ದೃಢೀಕರಣ ಪತ್ರ ತರಬೇಕು ಎಂದು ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.
ಉದ್ಯೋಗ ಮೇಳ
ಶಿವಮೊಗ್ಗ: ಪಿಇಎಸ್ ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಫೆ.8ರಂದು ಬೆಳಗ್ಗೆ 9 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಟಿ.ಡಿ ಪವರ್ ಸಿಸ್ಟಮ್ ಲಿಮಿಟೆಡ್ ಸಂಸ್ಥೆಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ನಗರದ ವಿವಿಧ ಕಾಲೇಜುಗಳಲ್ಲಿ ಅಂತಿಮ ವರ್ಷ ಓದುತ್ತಿರುವ ಡಿಪ್ಲೋಮ ಹಾಗೂ ಐಟಿಐ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಡಿಪ್ಲೋಮದಲ್ಲಿ ಎಲೆಕ್ಟ್ರಿಕಲ್ ಹಾಗೂ ಮೆಕಾನಿಕಲ್ ಮತ್ತು ಐಟಿಐನಲ್ಲಿ ಎಲೆಕ್ಟ್ರಿಕಲ್, ಫಿಟ್ಟರ್, ಮೆಕಾನಿಸ್ಟ್, ಟರ್‌ನರ್, ವೆಲ್ಡರ್ ಹಾಗೂ  ಸಿಎನ್‌ಸಿನ ವಿದ್ಯಾರ್ಥಿಗಳು, ಎಸ್ಸೆಸ್ಸೆಲ್ಸಿ ಸ್‌ಎಸ್‌ಎಲ್‌ಸಿಯಲ್ಲಿ ಶೇ.45 ರಷ್ಟು ಹಾಗೂ ಡಿಪ್ಲೋಮ-ಐಟಿಐನಲ್ಲಿ ಶೇ.60ರಷ್ಟು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಪಾಲ್ಗೊಳ್ಳಬಹುದು.ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಾಲೇಜಿನ ವಾಹನಗಳ ಸೌಕರ್ಯವಿರುತ್ತದೆ ಎಂದು ಪ್ರಭಾರ ಪ್ರಾಂಶುಪಾಲ ಡಾ. ಆರ್. ನಾಗರಾಜ ತಿಳಿಸಿದ್ದಾರೆ. ವಿವರಗಳಿಗಾಗಿ- 08182 640768.
ಮಾಧ್ಯಮ ಪ್ರಮುಖ್ ಮಧುಸೂಧನ್
ಶಿವಮೊಗ್ಗ: ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತ ಬಿ.ಆರ್. ಮಧುಸೂದನ್ ಅವರನ್ನು ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ ನೇಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com