ಮಹಿಳೆಯರ ಸ್ವಾವಲಂಬನೆಗೆ ಯೋಜನೆಯ ಕೊಡುಗೆ ಅಪಾರ
ಶಿಕಾರಿಪುರ: ಗ್ರಾಮೀಣ ಮಹಿಳೆಯರ ಸ್ವಾಭಿಮಾನ, ಸ್ವಾವಲಂಬನೆಯ ಬದುಕಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರವಾಗಿದೆ ಎಂದು ಹರಿಹರ ತಾಲೂಕು ನಂದಿಗುಡಿ ಬೃಹನ್ಮಠದ ಸಿದ್ದರಾಮೇಶ್ವರ ಸ್ವಾಮಿ ತಿಳಿಸಿದರು.
ತಾಲೂಕಿನ ಕಾಗಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯಿಂದ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಜವಾಬ್ದಾರಿ ಹಸ್ತಾಂತರ ಹಾಗೂ ಧಾರ್ಮಿಕ ಸಭೆ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಜಿಪಂ ಸದಸ್ಯೆ ಶಾಂತಮ್ಮ ಮಾತನಾಡಿ, ಎಲ್ಲಾ ರಂಗದಲ್ಲಿ ಮಹಿಳೆಯರು ಸಕ್ರೀಯವಾಗಿ ತೊಡಗಿಸಿಕೊಳ್ಳಲು ಯೋಜನೆಯ ಪಾತ್ರ ಮುಖ್ಯವಾಗಿದೆ ಎಂದರು.
ತಾಪಂ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ತಾಲೂಕಿನಲ್ಲಿ ಹೆಚ್ಚಿನ ಶಿಕ್ಷಕರ ಸಹಿತ ಸುಶಿಕ್ಷಿತರ ಗ್ರಾಮವಾಗಿರುವ ಕಾಗಿನಲ್ಲಿ ಗ್ರಾಮಸ್ಥರು ವಿದ್ಯಾಬ್ಯಾಸದ ಜತೆಗೆ ಸಾಂಸ್ಕೃತಿಕ, ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವ ಮೂಲಕ ವಿಶೇಷ ಗ್ರಾಮವಾಗಿ ಗುರುತಿಸಿಕೊಂಡಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಯೋಜನೆಯ ಪ್ರಗತಿ ಬಂಧು ನಿಧಿಯನ್ನು ಗ್ರಾಮದ ಹೆಚ್ಚಿನ ಮಹಿಳೆಯರು ಸದುಪಯೋಗಪಡಿಸಿಕೊಂಡು ಸ್ವಾವಲಂಭನೆಯ ಜೀವನದ ಮೂಲಕ ಮಾದರಿಯಾಗಿದ್ದಾರೆ ಎಂದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಗಾಯತ್ರಮ್ಮ ವಹಿಸಿದ್ದರು. ಸತ್ಯನಾರಾಯಣ ಪೂಜಾ ವಿಧಿ ವಿಧಾನ ಅಂತರವಳ್ಳಿ ಮಹಾಸಂಸ್ಥಾನ ಮಠದ ಗುರುಫಣಿ ಸ್ವಾಮಿ ನೇತೃತ್ವದಲ್ಲಿ ನಡೆಯಿತು.
ಯೋಜನಾಧಿಕಾರಿ ಶೇಖರ್ ಗೌಡ, ಸುರೇಶಾಚಾರ್, ವೀರಾಚಾರ್ ಇದ್ದರು. 41 ದಂಪತಿಗಳು ವ್ರತಧಾರಿಯಾಗಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

