ಶಿವಮೊಗ್ಗ

'ಅಶಕ್ತ ಯಕ್ಷಗಾನ ಕಲಾವಿದರಿಗೆ ಮಾಸಾಶನ ನೀಡಿ'

Published On :

ಸಾಗರ: ಅಶಕ್ತ ಯಕ್ಷಗಾನ ಕಲಾವಿದರಿಗೆ ಸರ್ಕಾರ ಮತ್ತು ಸಮಾಜ ಆರ್ಥಿಕ ಸಹಾಯವೂ ಸೇರಿದಂತೆ ಸೂಕ್ತ ಸೌಲಭ್ಯ ಒದಗಿಸಬೇಕು ಎಂದು ಜೋಷಿ ಫೌಂಡೇಶನ್ ಮುಖ್ಯಸ್ಥ ದಿನೇಶಕುಮಾರ್ ಜೋಷಿ ಹೇಳಿದರು.
 ಕಲ್ಲಗದ್ದೆ ಶಂಭುಶಿಷ್ಯ ಯಕ್ಷಗಾನ ಪ್ರತಿಷ್ಠಾನ ಕೆರೆಮನೆ ಶಂಭು ಹೆಗಡೆ ಸಂಸ್ಮರಣೆ ಅಂಗವಾಗಿ ಸಾಗರದ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನೆಬ್ಬೂರು ನಾರಾಯಣ ಭಾಗವತರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಮಾಸಾಶನ ನೀಡಿ: ಹೆಚ್ಚಿನ ಯಕ್ಷಗಾನ ಕಲಾವಿದರು ಆರ್ಥಿಕ ಸಂಕಷ್ಟದಿಂದ ಬದುಕುತ್ತಿದ್ದಾರೆ. ಅಂತಹ ಕಲಾವಿದರಿಗೆ ಮಾಸಾಶನ, ಅನಾರೋಗ್ಯಕ್ಕೆ ತುತ್ತಾದಾಗ ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ಕೆಲಸವನ್ನು ಸರ್ಕಾರ ಅಕಾಡೆಮಿಗಳ ಮೂಲಕ ಮಾಡಬೇಕು ಎಂದು ಒತ್ತಾಯಿಸಿದರು.
 ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್.ಜಯಂತ್, ಯಕ್ಷಗಾನ ಅಕಾಡೆಮಿಗಳಿಗೆ ಸರ್ಕಾರ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲುತ್ತಿಲ್ಲ. ಈ ನಿಟ್ಟಿನಲ್ಲಿ ಯಕ್ಷಗಾನ ಕಲೆಯ ರಕ್ಷಣೆಯ ಪರವಾಗಿ ಬಲವಾದ ಧ್ವನಿ ಹೊರಡಬೇಕು ಎಂದು ಅಭಿಪ್ರಾಯಪಟ್ಟರು.
ಯಕ್ಷಗಾನ ಉಳಿಸಿ: ಸನ್ಮಾನ ಸ್ವೀಕರಿಸಿದ ನೆಬ್ಬೂರು ನಾರಾಯಣ ಭಾಗವತರು, ಯಕ್ಷಗಾನ ಕಲೆಯ ಸಂರಕ್ಷಣೆ, ಪ್ರಸರಣ, ಪೋಷಣೆ ಕೆರೆಮನೆ ಶಂಭು ಹೆಗಡೆಯವರ ಪ್ರಮುಖ ಉದ್ದೇಶವಾಗಿತ್ತು. ಈ ದಿಸೆಯಲ್ಲಿ ಅವರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಆಗುಮಾಡಿದ್ದಾರೆ. ಮುಂದಿನ ಪೀಳಿಗೆ ಇದೇ ಉದ್ದೇಶವನ್ನಿಟ್ಟುಕೊಂಡು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಬೇಕು ಎಂದರು.
ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ರಂಗಕರ್ಮಿ ಕಾಗೋಡು ಅಣ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶೃಂಗೇರಿ ಶಂಕರಮಠದ ಅಶ್ವಿನಿಕುಮಾರ್ ಈ ಹಾಜರಿದ್ದರು. ಸಭಾ ಕಾರ್ಯಕ್ರಮದ ನಂತರ ಶಂಭುಶಿಷ್ಯ ಕಲ್ಲಗದ್ದೆ ವಿನಾಯಕ ಹೆಗಡೆ ಮತ್ತು ತಂಡದವರಿಂದ ಶ್ರೀಕೃಷ್ಣ ಸಂಧಾನ ಯಕ್ಷಗಾನ ಪ್ರದರ್ಶನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.