ಶಿವಮೊಗ್ಗ

ವಿದ್ಯುತ್ ಸಮಸ್ಯೆ ಪರಿಹರಿಸದಿದ್ದರೆ ಅಡ್ಡಿ

Published On :

ಶಿವಮೊಗ್ಗ: ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭಕ್ಕೆಂದು ಫೆ.10ರಂದು ಮುಖ್ಯಮಂತ್ರಿ ಶೆಟ್ಟರ್ ನಗರಕ್ಕೆ ಆಗಮಿಸುತ್ತಿದ್ದಾರೆ. ಅವರು ಇಲ್ಲಿಗೆ ಕಾಲಿಡುವ ಮುನ್ನ ನಾಡಿನ ಗ್ರಾಮೀಣ ಪ್ರದೇಶದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಅವರನ್ನು ಶಿವಮೊಗ್ಗಕ್ಕೆ ಕಾಲಿಡಲು ಬಿಡುವುದಿಲ್ಲ ಎಂದು ರೈತ ಸಂಘ ಎಚ್ಚರಿಸಿದೆ.
 ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಅನಿಯಮಿತ ಲೋಡ್ ಶೆಡ್ಡಿಂಗ್ ತಕ್ಷಣವೇ ಹಿಂಪಡೆದು ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮಕ್ಕೆ ಅಡ್ಡಿ: ಸಮಸ್ಯೆ ಪರಿಹಾರ ಮಾಡದೇ ಶಿವಮೊಗ್ಗಕ್ಕೆ ಕಾಲಿಟ್ಟರೆ ಅವರು ಭಾಗವಹಿಸುವ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲಾಗುವುದು. ಕಪ್ಪು ಬಾವುಟ ಪ್ರದರ್ಶನ, ಮುತ್ತಿಗೆ, ಘೇರಾವ್ ಹಾಕಲಾಗುವುದು. ಧಿಕ್ಕಾರದ ಘೋಷಣೆ ಮೊಳಗಿಸಲಾಗುವುದು ಎಂದು ಹೇಳಿದರು.
ವಿದ್ಯುತ್ ಕಡಿತ: ಪ್ರಸ್ತುತ ಗ್ರಾಮೀಣ ಭಾಗದಲ್ಲಿ ದಿನದ 24 ಗಂಟೆಯೂ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ಈ ರೀತಿಯ ವಿದ್ಯುತ್ ಕಡಿತ ಮಾಡಿದ ಉದಾಹರಣೆಯಿಲ್ಲ. ಇದು ರಾಜ್ಯ ಸರ್ಕಾರದ ರೈತ ವಿರೋಧಿ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ದೂರಿದರು.
 ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ವಿದ್ಯುತ್ ನೀಡಲು ಸರ್ಕಾರಕ್ಕೆ ಸಾಧ್ಯವಾಗದ ಮುಖ್ಯಮಂತ್ರಿಗಳು ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲು ಮುಂದಾಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.