ಶಿವಮೊಗ್ಗ

ಇಂದು ಉಸ್ತುವಾರಿ ಸಮಿತಿ ಸಭೆ

Published On :

ಶಿವಮೊಗ್ಗ: ಫೆಬ್ರವರಿ 5ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಗೆ ಸಮಿತಿಯ ಸದಸ್ಯರು ಸಕಾಲದಲ್ಲಿ ಭಾಗವಹಿಸುವಂತೆ ಹಾಗೂ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಆಗಮಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
12ರಂದು ಜಿಪಂ ಸಾಮಾನ್ಯ ಸಭೆ
ಶಿವಮೊಗ್ಗ: ಫೆ.12ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ನ ಸಾಮಾನ್ಯ ಸಭೆ ಏರ್ಪಡಿಸಲಾಗಿದೆ. (ಜನವರಿ 7ರಂದು ಕೋರಂನ ಕೊರತೆಯಿಂದಾಗಿ ಸಭೆಯನ್ನು ಮುಂದೂಡಲಾಗಿತ್ತು). ಸರ್ವ ಸದಸ್ಯರು ಸಕಾಲದಲ್ಲಿ ಸಭೆಗೆ ಆಗಮಿಸಿ, ಸಭೆಯ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಿಕೊಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಎಫ್‌ಡಿಸಿಗೆ ಸಂಜಯ ಬಿಜ್ಜೂರ್ ವರ್ಗಾವಣೆ
ಶಿವಮೊಗ್ಗ: ಹಿರಿಯ ಐಎಫ್‌ಎಸ್ ಅಧಿಕಾರಿ ಸಂಜಯ ಬಿಜ್ಜೂರ್ ಅವರನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರನ್ನು ಸರ್ಕಾರ ಭದ್ರಾ ಕಾಡ ಆಡಳಿತಾಧಿಕಾರಿಯಾಗಿ ಇತ್ತೀಚೆಗಷ್ಟೇ ನಿಯೋಜಿಸಿತ್ತು.
ಕೃತಜ್ಞತೆ ಸಲ್ಲಿಸಿದ ಶಾಸಕ ಸಂಗಮೇಶ್
ಭದ್ರಾವತಿ: ಪಟ್ಟಣದಲ್ಲಿ ತಮ್ಮ ನೇತೃತ್ವದಲ್ಲಿ ಆಯೋಜಿಸಿದ್ದ ಉದ್ಯೋಗಮೇಳ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ವೈಯಕ್ತಿಕವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ಬಿ.ಕೆ. ಸಂಗಮೇಶ್ ತಿಳಿಸಿದ್ದಾರೆ. ಮೇಳ ನಡೆಸಲು ಜಾಗದ ವ್ಯವಸ್ಥೆ ಮಾಡಿಕೊಟ್ಟ ಸಂಚಿಯ ಹೊನ್ನಮ್ಮ ಶಾಲಾ ಆಡಳಿತವರ್ಗಕ್ಕೆ, ಸಂಚಾರ ನಿಯಂತ್ರಣ ನಿರ್ವಹಿಸಿದ ರಕ್ಷಣಾ ಇಲಾಖೆಯವರಿಗೆ, ಭಾಗವಹಿಸಿದ ವಿವಿಧ ಉದ್ಯೋಗದಾತ ಕಂಪನಿಗಳಿಗೆ ಹಾಗೂ ಪರೋಕ್ಷವಾಗಿ ಉದ್ಯೋಗ ಮೇಳದ ಯಶಸ್ಸಿಗೆ ಕಾರಣರದವರಿಗೆ ಶಾಸಕರು ಪ್ರಕಟಣೆಯ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.