ಶಿವಮೊಗ್ಗ: ಜವಾಹರ್ಲಾಲ್ ನವೋದಯ ವಿದ್ಯಾಲಯಗಳ ಶಿಕ್ಷಕರು ಹಾಗೂ ನೌಕರರು ಭವಿಷ್ಯನಿಧಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನವೋದಯ ವಿದ್ಯಾಲಯ ವಸತಿ ಶಾಲೆಗಳಾಗಿವೆ. ಇಲ್ಲಿನ ಸಿಬ್ಬಂದಿ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದಾರೆ. ಆದರೆ, ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಆರ್ಥಿಕ ಸಹಾಯ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಬೇಡಿಕೆ ಈಡೇರಿಸುವಂತೆ ಹಲವು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ನಾವು ಕೇಂದ್ರ ಸರ್ಕಾರದ ನೌಕರರಾಗಿದ್ದು, ವೃದ್ಧಾಪ್ಯದಲ್ಲಿ ಯಾವುದೇ ಆರ್ಥಿಕ ಬೆಂಬಲವಿಲ್ಲ, ಇದ್ದರಿಂದ ನೌಕರರು ಮುಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ. ಮುಷ್ಕರದ ವೇಳೆ ನವೋದಯ ಶಾಲಾ ಶಿಕ್ಷಕರು ಮತ್ತು ನೌಕರರು ಇದ್ದರು.