ಉದ್ಯೋಗ ತಾರತಮ್ಯ ಸರಿಪಡಿಸಲು ಆಗ್ರಹ
ಶಿವಮೊಗ್ಗ: ನೆಮ್ಮದಿ ಕೇಂದ್ರದ ನೌಕರರ ಉದ್ಯೋಗ ತಾರತಮ್ಯವನ್ನು ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ನೆಮ್ಮದಿ ಕೇಂದ್ರದ ನೌಕರರು ಗುರುವಾರದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಜಿಲ್ಲೆಯಲ್ಲಿ 60 ಜನ ನೆಮ್ಮದಿ ಕೇಂದ್ರ ನೌಕರರಿದ್ದಾರೆ. ಇವರನ್ನು ಕೋಮ್ಯಾಟ್ ಸಂಸ್ಥೆ ಮುಖಾಂತರ ಗುತ್ತಿಗೆ ನೌಕರರಾಗಿ ಆಯ್ಕೆ ಮಾಡಿಕೊಂಡಿತ್ತು. 2011ರಲ್ಲಿ ಟೆಂಡರ್ ಬದಲಾಗಿದ್ದರಿಂದ ಹೊಸದಾಗಿ ಮೈಶೋರ್ ಐಟಿ ಕೂಡ ಇದೇ ನೌಕರರನ್ನು ಮುಂದುವರೆಸಿಕೊಂಡು ಬಂದಿತ್ತು. ಇದೀಗ ಪುನಃ ಟೆಂಡರ್ ಬದಲಾಗಿದೆ. ಪ್ರೈವೇಟ್ ಎಂಪ್ಲಾಯ್ಮೆಂಟ್ ಬ್ಯೂರೋ ಟೆಂಡರ್ ಪಡೆದಿದೆ. ಈ ಕಂಪನಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿರುವ ನೌಕರರನ್ನು ಕೈಬಿಟ್ಟು ಹೊಸ ಅಭ್ಯರ್ಥಿಗಳಿಂದ ಹಣ ಪಡೆದು ಅವರಿಗೆ ಉದ್ಯೋಗ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸ್ಪಂದನೆ ಇಲ್ಲ: ಈ ಸಂಬಂಧ ಹಾಲಿ ನೌಕರರು ಪ್ರೈವೇಟ್ ಎಂಪ್ಲಾಯಮೆಂಟ್ ಬ್ಯೂರೋ ಅವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ರೀತಿಯಲ್ಲಿ ಸ್ಪಂದನೆ ನೀಡಿಲ್ಲ. ಇದರಿಂದ ಕಳೆದ 6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
6 ವರ್ಷಗಳಿಂದ ನೆಮ್ಮದಿ ಕೇಂದ್ರಗಳಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಕೈಬಿಡದಂತೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯ ಸಿಗುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಸತ್ಯಾಗ್ರಹದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ಗೌಡ, ಗ್ರಾಮಾಂತರ ಅಧ್ಯಕ್ಷ ನರಸಿಂಹ, ನಗರಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಮಂಜುನಾಥ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

