ಶಿವಮೊಗ್ಗ

ಕೃಷ್ಣಪ್ಪ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹ

Published On :

ಸಾಗರ: ರಿಪ್ಪನಪೇಟೆಯ ಜನಪರ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಅವರ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿ ಕೆ.ಆರ್. ಪ್ರಕಾಶ್ ಸುಳ್ಳು ದೂರು ದಾಖಲಿಸಿರುವುದರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ದಸಂಸ ಹಾಗೂ ಮಲೆನಾಡು ಭೂರಹಿತರ ಹೋರಾಟ ವೇದಿಕೆಯ ವತಿಯಿಂದ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಫೆ.3ರಂದು ರಿಪ್ಪನಪೇಟೆಯಲ್ಲಿ ವರ್ತಕನೊಬ್ಬ ಲಾರಿಯಿಂದ ಕಿರಾಣಿ ಸಾಮಾನುಗಳನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕನಿಗೆ ವಾಣಿಜ್ಯ ತೆರಿಗೆ ಅಧಿಕಾರಿ ಕೆ.ಆರ್. ಪ್ರಕಾಶ್ ಲಂಚ ನೀಡಿಲು ಒತ್ತಾಯಿಸಿದ್ದು, ಟಿ.ಆರ್. ಕೃಷ್ಣಪ್ಪ ಸ್ಥಳಕ್ಕೆ ಬಂದು ಚಾಲಕನ ಪರವಾಗಿ ಮಾತನಾಡಿದ್ದಾರೆ. ಈ ಕಾರಣಕ್ಕಾಗಿ ಕೃಷ್ಣಪ್ಪ ಅವರನ್ನು ಅಧಿಕಾರಿ ನಿಂದಿಸಿದ್ದಲ್ಲದೇ ಅವರ ಮೇಲೆ ಸಾರ್ವಜನಿಕ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪ ಹಾಕಿ ಸುಳ್ಳು ದೂರು ದಾಖಲಿಸಿದ್ದಾರೆ. ಇದನ್ನು ಪರಿಶೀಲಿಸಿ ದೂರನ್ನು ತಿರಸ್ಕರಿಸಬೇಕಿದ್ದ ಪೊಲೀಸರು ದೂರು ದಾಖಲಿಸಿಕೊಂಡು ಕೃಷ್ಣಪ್ಪನವರನ್ನು ಬಂಧಿಸಿ, ಜೈಲಿಗೆ ಕಳಿಸಿರುವುದು ಖಂಡನೀಯ ಎಂದರು.
ಕೃಷ್ಣಪ್ಪ ಮೇಲಿನ ಸುಳ್ಳು ದೂರನ್ನು ವಾಪಸ್ ತೆಗೆದುಕೊಳ್ಳಬೇಕು ಹಾಗೂ ಕೃಷ್ಣಪ್ಪನವರೊಂದಿಗೆ ಅಸಭ್ಯವಾಗಿ ವರ್ತಿಸಿದ ವಾಣಿಜ್ಯ ತೆರಿಗೆ ಅಧಿಕಾರಿ ವಿರುದ್ಧ ಸೂಕ್ತ ಮೊಕದ್ದಮೆ ದಾಖಲಿಸಿ ತನಿಖೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಡಿಎಸ್‌ಎಸ್ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು, ಶಿವಾನಂದ ಕುಗ್ವೆ, ಮಲೆನಾಡು ಭೂರಹಿತರ ಹೋರಾಟ ವೇದಿಕೆಯ ಸಂಚಾಲಕ ಕಬಸೆ ಅಶೋಕಮೂರ್ತಿ, ಬಿ.ಎಚ್. ವೆಂಕಟೇಶ, ರಾಮಚಂದ್ರ, ತಾಲೂಕು ರೈತ ಸಂಘದ ಗೌರವಾಧ್ಯಕ್ಷ ಟಿ.ವಿ. ಮಲ್ಲೇಶಪ್ಪ, ಮಂಜುನಾಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.