ಶಿವಮೊಗ್ಗ

ಬಗರ್ ಹುಕುಂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ

Published On :

ಶಿವಮೊಗ್ಗ: ಇಲ್ಲಿನ ಆಯನೂರು ಗ್ರಾಮದಲ್ಲಿ ಬಗರ್ ಹುಕುಂ ಜಮೀನಿನ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಗುರುವಾರ ಸ್ಥಳೀಯ ಗ್ರಾಮಸ್ಥರು ಜಿಲ್ಲಾಧಿಕಾರಿಯವರಿಗೆ ಮನವಿ ಅರ್ಪಿಸಿದರು.
   ಈ ಭಾಗದ ಸರ್ವೇ ನ.123, 129 ರಲ್ಲಿ ಬಸ್ ನಿಲ್ದಾಣ, ವಿಜ್ಞಾನ ಕೇಂದ್ರ ಕಟ್ಟಡ, ಶಿಕ್ಷಣ ಕೇಂದ್ರ, ತಾರಾಲಯ ಹಾಗೂ ಉದ್ಯಾನವನ ನಿರ್ಮಾಣ ಮಾಡುವ ಉದ್ದೇಶದಿಂದ ಇಲ್ಲಿನ ಸಾಗುವಳಿ ಮಾಡುತ್ತಿರುವ ಸುಮಾರು 350 ಎಕರೆ  ಬಗರ್ ಹುಕುಂ ಜಮೀನು ಸ್ವಾಧೀನಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಇದ್ದರಿಂದ ಹತ್ತಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರು ಬೀದಿಪಾಲಾಗಲಿದ್ದಾರೆ ಎಂದು ರೈತರು ಮನವಿಯಲ್ಲಿ ತಿಳಿಸಿದರು.
ಜೆಡಿಎಸ್ ಮುಖಂಡ ಶಾರದಾ ಪೂರ್ಯಾನಾಯ್ಕ ಪ್ರತಿಕ್ರಿಯಿಸಿ, ಬಗರ್ ಹುಕುಂ ಸಾಗುವಳಿ ಜಮೀನುಗಳಿಗೆ ಕಾನೂನಿನ ಪ್ರಕಾರ ಹಕ್ಕು ಪತ್ರಕ್ಕೆ ಮನವಿ ಮಾಡಲಾಗಿದೆ. ಆದರೆ, ಇದುವರೆಗೂ ಯಾವುದೇ ಹಕ್ಕುಪತ್ರ ನೀಡಿಲ್ಲ. ಇದೀಗ ದಿಢೀರನೇ ಒಕ್ಕಲೆಬ್ಬಿಸಲು ಜಿಲ್ಲಾಡಳಿತ ಮುಂದಾಗಿರುವುದು ಸರಿಯಲ್ಲ. ಅಲ್ಲದೇ, ಇಲ್ಲಿ ಸರ್ಕಾರಿ ಕಟ್ಟಡಗಳು ಉದ್ಯಾನವನ ಮಾಡುವುದಕ್ಕೆ ಯಾವುದೇ ಅಕ್ಷೇಪವಿಲ್ಲ. ಆದರೆ, ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳನ್ನೇ ಏಕೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಯುತ್ತಿಲ್ಲ. ಇಂತಹ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಎಂದು ತಿಳಿಸಿದರು.
ಈ ವೇಳೆ ಆಯನೂರು ಭಾಗದ ರೈತರು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.